Advertisement

Bengaluru Jail: ಸರಕಾರದಿಂದಲೇ ದರ್ಶನ್‌ ಕೇಸ್‌ ಫೋಟೋ ವೈರಲ್‌: ಪ್ರಹ್ಲಾದ್‌ ಜೋಶಿ ಕಿಡಿ

04:06 AM Sep 07, 2024 | Team Udayavani |

ಹುಬ್ಬಳ್ಳಿ: ರಾಜ್ಯ ಸರಕಾರ ವಾಲ್ಮೀಕಿ ಹಾಗೂ ಮುಡಾ ಹಗರಣಗಳ ವಿಷಯಾಂತರ ಮಾಡಲು ನಟ ದರ್ಶನ್‌ ಕೇಸ್‌ ಮುನ್ನೆಲೆಗೆ ತಂದು ಸಂಕುಚಿತ ಷಡ್ಯಂತ್ರ ನಡೆಸಿದೆ. ಈ ಕೇಸ್‌ಗೆ ಸಂಬಂಧಿಸಿದ ಫೋಟೋಗಳನ್ನು ವೈರಲ್‌ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿನ ಶಿಕ್ಷೆಯಾಗಬೇಕು. ಆದರೆ ಸರಕಾರ ತಪ್ಪು ಮುಚ್ಚಿಕೊಳ್ಳಲು ದರ್ಶನ್‌ ಪ್ರಕರಣ ಬಳಸುತ್ತಿರುವುದು ಸರಿಯಲ್ಲ. ಫೋಟೋಗಳನ್ನು ವೈರಲ್‌ ಮಾಡಿರುವ ಬಗ್ಗೆ ನ್ಯಾಯಾಲಯವೂ ಪರಿಗಣನೆಗೆ ತೆಗೆದುಕೊಂಡು ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲೂ ಹಗರಣ ನಡೆದಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿದ ವರದಿ ಇಟ್ಟುಕೊಂಡು ತನಿಖೆಗೆ ಮುಂದಾಗಿರುವುದು ಆಶ್ಚರ್ಯಕರ ಸಂಗತಿ. ಒಂದೂವರೆ ವರ್ಷದಿಂದ ಸುಮ್ಮನಿದ್ದ ಸರಕಾರ ಈಗ ಹಗರಣದ ಬಗ್ಗೆ ಮಾತನಾಡುತ್ತಿದೆ. ಸರಕಾರ ಕಳ್ಳತನ ಮಾಡಿ ಸಿಕ್ಕುಬಿದ್ದಾಗ ಇನ್ನೊಬ್ಬರು ಕೂಡ ಕಳ್ಳತನ ಮಾಡಿದ್ದಾರೆ ಎಂದು ತೋರಿಸುತ್ತ ಬಚಾವಾಗುವ ತಂತ್ರವೇ? ಎಂದು ಪ್ರಶ್ನಿಸಿದ ಜೋಶಿ, ಇದೆಲ್ಲ ನಡೆಯುವುದಿಲ್ಲ ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.