Advertisement

Shiradi Ghat ರಸ್ತೆಗೆ ಉರುಳಿದ ಮರ: 2 ತಾಸು ವಾಹನ ಸಂಚಾರ ಸ್ಥಗಿತ

12:11 AM May 14, 2024 | Team Udayavani |

ಸಕಲೇಶಪುರ: ಭಾರೀ ಮಳೆಯಿಂದಾಗಿ ಶಿರಾಡಿ ಘಾಟಿಯಲ್ಲಿ ಮರ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

Advertisement

ತಾಲೂಕಿನಲ್ಲಿ ರವಿವಾರ ಮಧ್ಯಾಹ್ನ ಆರಂಭವಾದ ಮಳೆ ರಾತ್ರಿಯಿಡೀ ಸುರಿದು ಸೋಮವಾರ ಮುಂಜಾನೆಯೂ ಮುಂದುವರಿದಿತ್ತು.

ರವಿವಾರ ರಾತ್ರಿ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟಿಯಲ್ಲಿ ರಸ್ತೆಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿತ್ತು. ಸೋಮವಾರ ಮುಂಜಾನೆ ಪೊಲೀಸ್‌ ಹಾಗೂ ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಿ ಮರ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 2 ಗಂಟೆಗೂ ಹೆಚ್ಚು ಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next