ಬೆಂಗಳೂರು: ಈ ವರ್ಷವೂ ಬೆಂಗಳೂರಿನ ಹೃದಯ ಭಾಗ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಇರುವುದಿಲ್ಲ. ಕಳೆದ ವರ್ಷವೂ ಕೂಡ ಕೊರೊನಾ ಹಿನ್ನೆಲೆ ಎಂ.ಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆ ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿತ್ತು. ಈ ವರ್ಷವೂ ಒಮಿಕ್ರಾನ್ ಹಿನ್ನೆಲೆ ಸಾಮೂಹಿಕವಾಗಿ ಹೊಸ ವರ್ಷಾಚರಣೆ ನಡೆಸದಂತೆ ಸರ್ಕಾರ ಆದೇಶಿಸಿದೆ.
ಸರ್ಕಾರದ ಸೂಚನೆ ಮೇರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ ಐದು ಗಂಟೆವರೆಗೆ ಯಾವುದೇ ವ್ಯಾಪಾರ, ವಹಿವಾಟು ನಡೆಯುವಂತಿಲ್ಲ. ಈ ಮಧ್ಯೆ ಶುಕ್ರವಾರ ಸಂಜೆ ಆರು ಗಂಟೆಯಿಂದ ಜ.1ರ ಮುಂಜಾನೆ 6 ಗಂಟೆವರೆಗೆ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಸಮೀಪದ ರಸ್ತೆಗಳಲ್ಲಿ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ಕರ್ಫ್ಯೂ ಜಾರಿ ಇರಲಿದೆ. ಆದರೆ, ಡಿ.31ರ ಸಂಜೆ 6 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪು ಗೂಡುವುದನ್ನು ನಿಷೇಧಿಸಲಾಗಿದೆ. ಆದರೆ, ಶುಕ್ರವಾರ ರಾತ್ರಿ 10 ಗಂಟೆವರೆಗೆ ಹೋಟೆಲ್, ಪಬ್, ಕ್ಲಬ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಚಟುವಟಿಕೆ ನಡೆ ಸಲು ಅವಕಾಶವಿದೆ. ಬಳಿಕ ರಾತ್ರಿ 10ರ ಬಳಿಕ ಕರ್ಫ್ಯೂ ಜಾರಿಯಾಗಿರುವುದರಿಂದ ಈ ಎಲ್ಲ ಚಟುವಟಿಕೆಗಳು ಬಂದ್ ಆಗಲಿವೆ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತ: 24ಗಂಟೆಯಲ್ಲಿ 16,764 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 1,270ಕ್ಕೆ ಏರಿಕೆ
ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲೂ ಪೊಲೀಸರು ಬ್ಯಾರಿಕೇಡ್ ಹಾಕಿ ವಾಹನಗಳ ತಪಾಸಣೆ ಮಾಡಲಿದ್ದಾರೆ ಹಾಗೂ ಹೊಯ್ಸಳ, ಚೀತಾ ವಾಹನಗಳು ಗಸ್ತು ಮಾಡಿ, ಧ್ವನಿ ವರ್ಧಕಗಳ ಮೂಲಕ ಗುಂಪುಗೂಡದಂತೆ ಎಚ್ಚರಿಕೆ ನೀಡಲಿದ್ದಾರೆ.
200 ವಾಹನಗಳ ಜಪ್ತಿ: ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಜಾರಿಗೆ ಬಂದಿ ರುವ ನೈಟ್‌ಕರ್ಫ್ಯೂ ಸಂದರ್ಭದಲ್ಲಿ ಅನಗತ್ಯ ವಾಗಿ ಓಡಾಡಿ ನಿಯಮ ಉಲ್ಲಂ ಸಿದ 200ಕ್ಕೂ ಹೆಚ್ಚು ವಾಹನಗಳನ್ನು ನಗರ ಪೊಲೀಸರು ಜಪ್ತಿ ಮಾಡಿದ್ದಾರೆ.