ಮೈಸೂರು: ಮುಂದಿನ 2022ರ ದಸರಾ ಹಬ್ಬಕ್ಕೆ ಮುಂಚಿತವಾಗಿ ಬೆಂಗಳೂರು-ಮೈಸೂರು ಹತ್ತು ಪಥದ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನ ಮೊದಲ ಹಾಗೂ ಎರಡನೇ ಅಲೆ ಹಿನ್ನೆಲೆ ರಸ್ತೆ ಕಾಮಗಾರಿ ನಡೆಯೋದಿಲ್ಲ ಎಂಬ ಭಾವನೆ ಇತ್ತು. ಆದರೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 2022ರ ಮೈಸೂರು ದಸರಾ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ನೆರವು ಇಲ್ಲದೆ, ಸಂಪೂರ್ಣ ಕೇಂದ್ರ ಸರ್ಕಾರದ ಹಣದ ಮೂಲಕ ನಿರ್ಮಾಣ ಕಾರ್ಯ ಮಾಡಲಾಗಿದೆ, ಈ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಒಂದು ರೂಪಾಯಿಯನ್ನು ಪಡೆದಿಲ್ಲ ಎಂದರು.
ಇದನ್ನೂ ಓದಿ :BJP ಸರಕಾರ ಬೀಳುತ್ತೆ ಎಂಬ ವಿಚಾರದಲ್ಲಿ ಯಾರ ಕನಸು ನನಸಾಗಲ್ಲ : ಕಾಂಗ್ರೆಸ್ ಗೆ ಕೋಟ ತಿರುಗೇಟು
ಈಗಾಗಲೇ 60 ಕಿಮೀ ಬೈಪಾಸ್ ಸಂಪೂರ್ಣ ಕಾಮಗಾರಿ ಪೂರ್ಣಗೊಂಡಿದ್ದು ಜನವರಿ ವೇಳೆಗೆ ಎಲ್ಲ ಬೈಪಾಸ್ ಗಳನ್ನ ತೆರೆಯಲಾಗುವುದು ಕಾಮಗಾರಿ ಪೂರ್ಣಗೊಂಡ ಬಳಿಕ ಮೈಸೂರಿನಿಂದ ಬೆಂಗಳೂರಿಗೆ ಒಂದು ಗಂಟೆಯ ಒಳಗಾಗಿ ತಲುಪಬಹುದು ಎಂದರು.
ದೇಶದ ಅತಿದೊಡ್ಡ ಪ್ರೊಜೆಕ್ಟ್ ಇದಾಗಿದ್ದು, ನಿಗದಿತ ಸಮಯಕ್ಕಿಂತ ಹೆಚ್ಚು ಅವಧಿಯಲ್ಲಿ ಮುಕ್ತಾಯವಾಗುವ ರಸ್ತೆ ಇದಾಗಿದೆ ಎಂದು ಹೇಳಿದ್ದಾರೆ.