Advertisement

Bengaluru-Mysuru Expressway; ಅಪಘಾತದಲ್ಲಿ ಆರ್‌ಬಿಐ ನೌಕರ ಮೃತ್ಯು

05:05 PM Jun 16, 2023 | Team Udayavani |

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಆರ್‌ಬಿಐ ನೌಕರ ಸಾವನ್ನಪ್ಪಿರುವ ಘಟನೆ ರಾಮನಗರ ಬಳಿಯ ಜೈಪುರ ಗೇಟ್ ಬಳಿ ನಡೆದಿದೆ.

Advertisement

ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್‌ಬಿಐ ನೌಕರ ಜಗದೀಶ್ (48) ಮೃತಪಟ್ಟಿದ್ದಾರೆ. ಪತ್ನಿ ನಂದಿತಾ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರೆಟಾ ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಬೇಲಿಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿ ರಭಸಕ್ಕೆ ಕಾರು ಸರ್ವಿಸ್ ರಸ್ತೆಗೆ ಉರುಳಿದ್ದು, ಜಗದೀಶ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಜಗದೀಶ್ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next