Advertisement
ಬೆಂಗಳೂರಿನ ಪಂಚಮುಖೀ ಗಣಪತಿ ದೇವಾಲಯದಿಂದ ಆರಂಭವಾಗುವ ಹೆದ್ದಾರಿಯ ಪ್ರಯಾಣದ ಸಮಯ ಕಡಿತಗೊಂಡಿದೆ. ಎರಡು ಗಂಟೆಗಳ ಪ್ರಯಾಣ 90 ನಿಮಿಷಕ್ಕೆ ಇಳಿಕೆ ಯಾಗಿದೆ. ಇದರಿಂದ ಬೇಗ ತಲುಪುವ ಧಾವಂತದಲ್ಲಿ ವಾಹನ ಚಾಲಕರು 120 ಕಿ.ಮೀಗಿಂತ ಹೆಚ್ಚು ವೇಗವಾಗಿ ಚಲಿಸುವುದರಿಂದ ಅಪಘಾತಗಳು ಸಂಭವಿಸುತ್ತಿವೆ.
Related Articles
Advertisement
80ಕ್ಕೂ ಹೆಚ್ಚು ಸಾವು: ಕಳೆದ ಆರು ತಿಂಗಳಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 300ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 80ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಂಕಿ ಅಂಶಗಳು ಹೇಳುತ್ತವೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಹೆದ್ದಾರಿ ಉದ್ಘಾಟಿಸಿದ ಕೆಲವೇ ಘಂಟೆಗಳಲ್ಲಿ ಮದ್ದೂರಿನ ಶಿಂಷಾನದಿಯ ಪ್ಲೆ„ಓವರ್ ಮೇಲೆ ಕಾರೊಂದು ಪಲ್ಟಿಯಾಗಿತ್ತು. ಕಾರಿನಲ್ಲಿದ್ದ ಏರ್ ಬ್ಯಾಗ್ ತೆರೆದಿದ್ದರಿಂದ ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂತಹ ಘಟನೆಗಳು ಆಗಾಗ್ಗೆ ಸಂಭವಿಸುತ್ತಲೇ ಇವೆ.
ತುರ್ತು ವೈದ್ಯಕೀಯ ಸೌಲಭ್ಯವಿಲ್ಲ: ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದರೆ ತುರ್ತು ವೈದ್ಯಕೀಯ ಸೌಲಭ್ಯಗಳು ಸಿಗುವುದಿಲ್ಲ. ಇದರಿಂದ ಅಪಘಾತ ಸಂಭವಿಸಿದಾಗ ಗಾಯಾಳುಗಳು ಸಾವನ್ನಪ್ಪುವ ಸಾಧ್ಯತೆಗಳೇ ಹೆಚ್ಚಿದೆ. ಹೆದ್ದಾರಿಯ ಮಧ್ಯೆದಲ್ಲಿ ರಸ್ತೆ ವಿಭಜಕವಿದ್ದು, ಕಬ್ಬಿಣದ ತಡೆಗೋಡೆಗಳನ್ನು ನಿರ್ಮಾಣ ಮಾಡಲಾಗಿದೆ. ಇದರಿಂದ ರೋಗಿಯನ್ನು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ಯಲು ಸಾಧ್ಯವಾಗದ ಸ್ಥಿತಿ ಇದೆ. ತುರ್ತಾಗಿ ಆ್ಯಂಬುಲೆನ್ಸ್‌ಗಳು ಹೋಗಲು ಯುಟರ್ನ್ ಇಲ್ಲದಿರುವುದು ಗಾಯಾಳುಗಳನ್ನು ಸಾಗಿಸಲು ತೊಂದರೆಯಾಗುತ್ತಿದೆ.
ಇಂದು ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ಜಾರಿ : ಹೆದ್ದಾರಿ ಪ್ರಾಧಿಕಾರವು ರಾಷ್ಟ್ರೀಯ ಹೆದ್ದಾರಿ ಬಳಕೆಗಾಗಿ ಟೋಲ್ ಶುಲ್ಕಗಳು ಇಂದು ಬೆಳಗ್ಗೆ 8ಗಂಟೆಯೊಂದಲೇ ಅನ್ವಯವಾಗಲಿದೆ. ಕಾರು, ಜೀಪು, ವ್ಯಾನ್‌ಗಳಿಗೆ ಏಕಮುಖ ಸಂಚಾರಕ್ಕೆ ರೂ.135 ಅದೇ ದಿನ ಮರು ಸಂಚಾರಕ್ಕೆ ರೂ. 205, 1 ತಿಂಗಳಲ್ಲಿ 50 ಏಕಮುಖ ಸಂಚಾರಕ್ಕೆ ತಿಂಗಳ ಪಾಸ್ ಶುಲ್ಕ ರೂ. 4525, ಬಸ್ ಅಥವಾ ಟ್ರಕ್ ಏಕ ಮುಖ ಸಂಚಾರಕ್ಕೆ ರೂ. 460 ಅದೇ ದಿನ ಮರು ಸಂಚಾರಕ್ಕೆ ರೂ. 690, 1 ತಿಂಗಳಲ್ಲಿ 50 ಏಕಮುಖ ಸಂಚಾರಕ್ಕೆ ತಿಂಗಳ ಪಾಸ್ ಶುಲ್ಕ ರೂ. 15325, ಲಘು ವಾಣಿಜ್ಯ ವಾಹನಗಳು, ಮೂರು ಅಕ್ಸೆಲ್ ವಾಣಿಜ್ಯ ವಾಹನಗಳು ಮತ್ತು ಭಾರಿ ಪ್ರಮಾಣ ಯಂತ್ರಗಳು ಗಳಿಗೆ ವಿವಿಧ ದರಗಳನ್ನು ನಿಗದಿಪಡಿಸಿರುವುದಾಗಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿದಿನ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಬೆಂಗಳೂರು-ಮೈಸೂರು ಮಧ್ಯಭಾಗದಲ್ಲಿ ಟ್ರಾಮಾಕೇರ್ ಸೆಂಟರ್ ತೆರೆಯುವಂತೆ ಈಗಾಗಲೇ ಕೇಂದ್ರ, ರಾಜ್ಯ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದೇವೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಕ್ರಮ ವಹಿಸಬೇಕು. – ದಿನೇಶ್‌ಗೂಳಿಗೌಡ, ಎಂಎಲ್‌ಸಿ, ಮಂಡ್ಯ
-ಎಚ್.ಶಿವರಾಜು