ಬೆಂಗಳೂರು: ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಶ್ರೀ ಪರಶುರಾಮನ ಕಂಚಿನ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲು ಕೋರಿ ಕಾಮಗಾರಿ ನಿರ್ವಹಿಸುತ್ತಿರುವ ಕ್ರಿಶ್ ಆರ್ಟ್ ವರ್ಲ್ಡ್ ಸಲ್ಲಿಸಿರುವ ಮನವಿಯನ್ನು ಕಾನೂನು ರೀತಿ ಪರಿಗಣಿಸಿ ಎರಡು ವಾರಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಇದನ್ನೂ ಓದಿ:ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ
ಈ ಕುರಿತು ಕ್ರಿಶ್ ಆರ್ಟ್ ವರ್ಲ್ಡ್ ನ ಮಾಲೀಕ ಕೃಷ್ಣ ನಾಯಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಅರ್ಜಿದಾರರಾದ ಕ್ರಿಶ್ ಆರ್ಟ್ ವರ್ಲ್ಡ್ ಅವರ 2024ರ ಜ.9ರ ಮನವಿಯಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನಿರ್ಮಿತಿ ಕೇಂದ್ರ ಏಪ್ರಿಲ್ 22ರಂದು ಹೈಕೋರ್ಟ್‌ಗೆ ಮುಚ್ಚಳಿಕೆ ಬರೆದುಕೊಟ್ಟಿತ್ತು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿದಾರರ ಮನವಿಯನ್ನು ಎರಡು ವಾರಗಳಲ್ಲಿ ಪರಿಗಣಿಸುವಂತೆ ನಿರ್ಮಿತಿ ಕೇಂದ್ರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು
ಇತ್ಯರ್ಥಪಡಿಸಿತು. ಕೋರ್ಟ್ ಆದೇಶ ಹೊರಡಿಸಿದ ದಿನಾಂಕದಿಂದ ಮುಂದಿನ ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂಬ ಷರತ್ತು ವಿಧಿಸಿದೆ.