Advertisement

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

08:10 AM Nov 27, 2024 | Team Udayavani |

ಬೆಂಗಳೂರು: ನಗರದಲ್ಲಿನ ಉದ್ಯಾನವನಗಳ ಸ್ವತ್ಛತೆ ಕಾಯ್ದುಕೊಳ್ಳುವ ಕುರಿತಂತೆ ಹಲವು ಮಾರ್ಗ ಸೂಚಿಗಳನ್ನು ರಚಿಸಿರುವ ಹೈ ಕೋರ್ಟ್‌, ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಸೂಚನೆ ನೀಡಿದೆ.

Advertisement

ಉದ್ಯಾನವನಗಳಲ್ಲಿ ಸಾಕು ನಾಯಿಗಳಿಂದ ಆಗುತ್ತಿರುವ ಮಲ ವಿಸರ್ಜನೆಗೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ “ಕಂಪ್ಯಾಷನ್‌ ಅನ್‌ಲಿಮಿಟೆಡ್‌ ಪ್ಲಸ್‌ ಅಕ್ಷನ್‌ (ಕ್ಯೂಪ) ಎಂಬ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಉದ್ಯಾನವನಗಳ ಸ್ವಚ್ಛತೆಗೆ ಸಂಬಂಧಿಸಿದಂತೆ ಕೆಲವು ಮಾರ್ಗಸೂಚಿಗಳನ್ನು ರಚಿಸಿ ಆದೇಶಿಸಿತು.

ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯಿವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವತ್ಛತೆಯನ್ನು ಕಾಯ್ದುಕೊಳ್ಳುವುದು ಮತ್ತು ಅದನ್ನು ಉಲ್ಲಂ ಸುವವರ ವಿರುದ್ಧ ದಂಡವನ್ನು ವಿಧಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜವಾಬ್ದಾರಿಯಾಗಿರಲಿದೆ ಎಂದು ಹೈಕೋರ್ಟ್‌ ಹೇಳಿದೆ.

ತೋಟಗಾರಿಕೆ ಇಲಾಖೆಯ ಒಬ್ಬ ಅಧಿಕಾರಿ ಮತ್ತು ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ತಂಡವನ್ನು ರಚಿಸಿ, ಕಾಲ ಕಾಲಕ್ಕೆ ನಗರದ ಎಲ್ಲ ಪ್ರಮುಖ ಉದ್ಯಾನವನಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಸ್ವಚ್ಛತೆಗೆ ಸಂಬಂಧಿಸಿದಂತೆ ಕ್ರಮಗಳನ್ನು ಪರಿ ಣಾಮಕಾರಿ ಯಾಗಿ ಅನುಷ್ಠಾನಗೊಳಿಸಿರುವ ಸಂಬಂಧದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೈಕೋರ್ಟ್‌ ತಿಳಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ಉದ್ಯಾನವನಗಳಲ್ಲಿ ಸಾಕಪ್ರಾಣಿಗಳ ವಿಸರ್ಜನೆ ಮಾಡುವ ಸ್ವತ್ಛಗೊಳಿಸುವ ಪ್ರಕ್ರಿಯೆಯಲ್ಲಿ ಬೇಜವಾಬ್ದಾರಿತ ನದಿಂದ ವರ್ತಿಸುತ್ತಿದ್ದಾರೆ. ಈ ಸಂಬಂಧ ಸಾರ್ವ ಜನಿಕರಿಂದ 1,288 ದೂರುಗಳ ದಾಖಲಾಗಿವೆ ಎಂಬುದಾಗಿ ಅರ್ಜಿಯಲ್ಲಿ ವಿವರಿಸಲಾಗಿದೆ.

Advertisement

ಮಾರ್ಗಸೂಚಿಗಳು

ಉದ್ಯಾನವನಗಳು ಸೇರಿದಂತೆ ಬಿಬಿಎಂಪಿ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮಗಳು 2016ರನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ನಿಯಮಗಳ ತಿದ್ದುಪಡಿಗೆ ಪಾಲಿಕೆ ಕ್ರಮ ವಹಿಸಬೇಕು.

ಉದ್ಯಾನವನಗಳಲ್ಲಿ ಸ್ವತ್ಛತೆ ಕಾಪಾಡುವುದು ಮತ್ತು ನಿರ್ವಹಣೆಗಾಗಿ ಸರ್ಕಾರ ಸೆರಿದಂತೆ ಸಂಬಂಧಪಟ್ಟ ಪ್ರಾಧಿಕಾರಗಳು ಅಗತ್ಯ ಅನುದಾನ ಮೀಸಲಿಡಬೇಕು.

ಉದ್ಯಾನವನಗಳ ಕುರಿತ ಜಾಗರೂಕತೆಯನ್ನು ಕಾಯ್ದುಕೊಳ್ಳುವುದಕ್ಕಾಗಿ ರಾಜ್ಯ ಸರ್ಕಾರ, ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಶಾಶ್ವತವಾದ ಕಾರ್ಯವಿಧಾನವನ್ನು ರೂಪಿಸಿ ಅಭಿವೃದ್ಧಿ ಪಡಿಸಬೇಕು

ನಾಯಿಗಳ ತ್ಯಾಜ್ಯ ವಿಲೇವಾರಿಗೆ ಮಾಲಿಕರೇ ಕೈ ಚೀಲ ತರಲಿ: ಹೈಕೋರ್ಟ್‌ ಆದೇಶ
ಸಾರ್ವಜನಿಕ ಉದ್ಯಾನವನಗಳಿಗೆ ಸಾಕು ನಾಯಿಗಳನ್ನು ಕರೆತರುವ ಪೋಷಕರು ಅದು ವಿಸರ್ಜನೆ ಮಾಡುವ ತ್ಯಾಜ್ಯವನ್ನು ವಿಲೇವಾರಿ ಮಾಡಲು ಕೈ ಚೀಲಗಳನ್ನು ತೆಗೆದುಕೊಂಡು ಬರಬೇಕು ಎಂಬ ಜಾಗೃತಿ ಮೂಡಿಸಬೇಕಾದ ಅಗತ್ಯವಿದ್ದು, ನಾಯಿಗಳ ವಿಕೃತ ನಡೆಯಿಂದ ಉದ್ಯಾನಕ್ಕೆ ಭೇಟಿ ನೀಡುವವರಿಗೆ ರಕ್ಷಣೆ ನೀಡಬೇಕಾಗಿದೆ. ಅಲ್ಲದೆ,
ಸಾರ್ವಜನಿಕ ಉದ್ಯಾನವನಗಳಲ್ಲಿ ಎಲ್ಲ ರೀತಿಯ ಸತ್ಛತೆ ಕಾಯ್ದುಕೊಳ್ಳುವುದು ಕಡ್ಡಾಯವಾಗಿರಬೇಕಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next