Advertisement
ಬಿಸಿಲಿನ ಝಳಕ್ಕೆ ಹೆದರಿ ಕೆಲವರು ಮನೆಯಿಂದ ಹೊರಬರುವುದಕ್ಕೆ ಹೆದರುತ್ತಿದ್ದಾರೆ. ಹೀಗಾಗಿಯೇ ಸಿಲಿಕಾನ್ ಸಿಟಿ ಬೆಂಗಳೂರು ಈಗ ಬಿಸಿಲೂರು ಆಗಿದೆ. ಈ ಮಧ್ಯೆ, ಸೋಮವಾರ ಬೆಂಗಳೂರು ಸಿಟಿಯಲ್ಲಿ 38.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಮಧ್ಯಾಹ್ನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬೆಂಗಳೂರು ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು. ಜತೆಗೆ ಹೆಬ್ಟಾಳದ ಜಿಕೆವಿಕೆಯಲ್ಲಿ 37.0 ತಾಪಮಾನ ದಾಖಲಾಗಿತ್ತು ಎಂದು ರಾಜ್ಯ ಹವಾಮಾನ ಇಲಾಖೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Related Articles
Advertisement
ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.
ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.
ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.
ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.
ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ, ಕಾರ್ಬೋ ನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ.
ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಬಳಸಿ
ಸನ್‌ಸ್ಟ್ರೋಕ್‌ನಿಂದ ಪೀಡಿತ ವ್ಯಕ್ತಿಯನ್ನು ಒದ್ದೆ ಬಟ್ಟೆಯಿಂದ ಒರೆಸಿ.