ಬೆಂಗಳೂರು: ಉಗ್ರ ಸಂಘಟನೆಯೊಂದಕ್ಕೆ ಸೇರಿದವನೆಂದು ಹೇಳಲಾದ ಶಂಕಿತ ಉಗ್ರನೊಬ್ಬನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.
ಅಸ್ಸಾಂ ಮೂಲದ ಅಖ್ತರ್ ಹುಸೇನ್ ಎಂಬಾತನೇ ಬಂಧಿತ ಉಗ್ರ. ಈತನ ಜೊತೆಗೆ ಇದ್ದ ಸ್ಥಳೀಯ ಸಹಚರರನ್ನು ಸಹ ವಿಚಾರಣೆ ನಡೆದಿದ್ದು, ಅವನು ನಡೆಸಿದ ಚಟುವಟಿಕೆಗಳ ಬಗ್ಗೆ ತನಿಖೆ ನಡೆಯುತ್ತಿದೆ.
ಇತ್ತೀಚೆಗೆ, ಜಮ್ಮು ಕಾಶ್ಮೀರ ದಲ್ಲಿ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ಹಾಗೂ ಓಕಳಿಪೂರ ಪ್ರದೇಶದಲ್ಲಿ ನೆಲೆಸಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ ನಂತರ ಮತ್ತೊಬ್ಬ ಉಗ್ರನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಇದನ್ನೂ ಓದಿ:ಇಡೀ ರಾಜ್ಯವೇ ನನ್ನ ಕ್ಷೇತ್ರ, ಪಕ್ಷ ಹೇಳಿದರೆ ಸ್ಪರ್ಧೆ ಮಾಡುತ್ತೇನೆ: ವಿಜಯೇಂದ್ರ
ತಿಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿ ಈತ ಕೆಲವು ಫುಡ್ ಡೆಲಿವರಿ ಮಾಡುವ ಹುಡುಗರ ಜೊತೆ ವಾಸವಿದ್ದ. ರವಿವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಶಂಕಿತ ಉಗ್ರ ವಾಸವಿದ್ದ ಮನೆ ಮೇಲೆ ದಾಳಿ ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ 30 ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲು ಮಾಡಲಾಗಿದೆ.