Advertisement

Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ 15ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ…

11:10 AM Dec 01, 2023 | Team Udayavani |

ಬೆಂಗಳೂರು: ಶುಕ್ರವಾರ ಬೆಂಗಳೂರಿನಾದ್ಯಂತ 15 ಕ್ಕೂ ಹೆಚ್ಚು ಶಾಲೆಗಳಿಗೆ ಅನಾಮಧೇಯ ಇ- ಮೇಲ್‌ಗಳ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪರಿಣಾಮ ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲಾ ಅಧಿಕಾರಿಗಳಲ್ಲಿ ಭಯಭೀತರಾಗಿದ್ದಾರೆ.

Advertisement

ಇಂದು( ಶುಕ್ರವಾರ) ಬೆಳಿಗ್ಗೆ ಮಕ್ಕಳು ಶಾಲೆಗಳಿಗೆ ಬಂದಿದ್ದು ಇನ್ನೂ ಕೆಲವು ಮಕ್ಕಳು ಶಾಖೆಗೆ ಬರುತ್ತಿದ್ದರು ಅಷ್ಟೋತ್ತಿಗೆ ಇ ಮೇಲ್ ಪರಿಶೀಲಿಸಿದ ಶಾಲಾ ಅಧಿಕಾರಿಗಳಿಗೆ ಶಾಕ್ ಆಗಿದೆ. ಇ ಮೇಲ್ ನಲ್ಲಿ ಶಾಲೆಗಳಿಗೆ ಬಾಂಬ್ ಹಾಕುವ ಬೆದರಿಕೆ ಹಾಕಲಾಗಿದ್ದು ಕಂಗಾಲಾದ ಶಾಲಾ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ತೆರಳುವಂತೆ ಸೂಚಿಸಿದ್ದಾರೆ ಅಲ್ಲದೆ ಕೆಲವು ಮಕ್ಕಳು ಶಾಲೆಗೆ ಬರುತ್ತಿದ್ದು ಆ ಮಕ್ಕಳನ್ನು ಗೇಟ್ ನಿಂದಲೇ ಹಿಂದೆ ಕಳುಹಿಸಿದ್ದಾರೆ.

ಇದೇ ರೀತಿ ಸುಮಾರು ಹದಿನೈದಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ ಎನ್ನಲಾಗಿದ್ದು ಕೂಡಲೇ ಎಚ್ಚೆತ್ತ ಪೊಲೀಸ್ ಅಧಿಕಾರಿಗಳ ತಂಡ ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದೆ.

ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ, ಮಹದೇವಪುರದ ಗೋಪಾಲನ್ ಇಂಟನ್ರ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‍ ಸೇರಿದಂತೆ ಹಲವಾರು ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳಿಂದ ಬೆದರಿಕೆ. ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಆಗಮಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದ ಬಳಿ ಇರುವ ಶಾಲೆಗೂ ಬಾಂಬ್ ಬೆದರಿಕೆ ಇದೆ ಎನ್ನಲಾಗಿದೆ.

Advertisement

ಸದ್ಯ ಶಾಲೆಗಳಿಗೆ ಬಾಂಬ್ ನಿಷ್ಕ್ರಿಯ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಆತಂಕ ಬೇಡ:
ಮಕ್ಕಳು, ಪೋಷಕರು ಭಯ, ಆತಂಕಪಡುವ ಅಗತ್ಯವಿಲ್ಲ. ನಮ್ಮ ಸಿಬ್ಬಂದಿ ಪರಿಶೀಲನೆ ಮುಂದುವರೆಸಿದ್ದಾರೆ. ಇದು ಹುಸಿ ಬಾಂಬ್ ಕರೆಯೋ ಎಂಬುದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ. ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು. ಆಗ ಪರಿಶೀಲನೆ ನಡೆಸಿದಾಗ ಅದು ಹುಸಿ ಕರೆ ಎಂಬುದು ತಿಳಿದಿತ್ತು. ಇಂತಹ ಬೆದರಿಕೆ ಹಾಕಿದವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

ಇದನ್ನೂ ಓದಿ: Kambala; ಧಾರ್ಮಿಕ ಹಿನ್ನೆಲೆಯ ಶಿರ್ವ ನಡಿಬೆಟ್ಟು ಕಂಬಳ; ಇತಿಹಾಸದ ಪುಟದಲ್ಲಿ ದಾಖಲಾದ ವೈಭವ

Advertisement

Udayavani is now on Telegram. Click here to join our channel and stay updated with the latest news.

Next