Advertisement

Bengaluru: ಸಿಎಂ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಖಾಸಗಿ ದೂರು

12:14 PM Sep 14, 2024 | Team Udayavani |

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಿದ್ದಾರೆ.

Advertisement

2013-2018ರ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆಂದು ಪಾಲಿಕೆ ಒಡೆತನದ 493 ಬಸ್‌ ತಂಗುದಾಣಗಳನ್ನು ಬಳಸಿಕೊಂಡಿದ್ದರು. ಆದರೆ ಪಾಲಿಕೆಗೆ ರಾಜ್ಯ ಸರ್ಕಾರವು ಪಾವತಿಸಬೇಕಿದ್ದ 68.14 ಕೋಟಿ ರೂ. ಪಾವತಿಸದೆ ವಂಚಿಸಲಾಗಿದೆ ಎಂದು ದೂರಿದ್ದಾರೆ.

2015-2017ರ ವರ್ಷಗಳ ಅವಧಿಯಲ್ಲಿ ಬಿಬಿಎಂಪಿಯ 493 ಬಸ್‌ ಶೆಲ್ಟರ್‌ಗಳನ್ನು ತಮ್ಮ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆಂದು ಬಳಸಿಕೊಂಡಿದ್ದಾರೆ. ಆದರೆ ಜಾಹೀರಾತು ಶುಲ್ಕ ಪಾವತಿಸಿಲ್ಲ. ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಲೋಕಾಯುಕ್ತದಲ್ಲಿ ದಾಖಲೆ‌ ಸಹಿತ ದೂರು ದಾಖಲಿಸಲಾಗಿತ್ತು. ಆದರೆ ಪ್ರಕರಣ ವನ್ನು ಲೋಕಾಯುಕ್ತ ಮುಕ್ತಾಯಗೊಳಿಸಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next