Advertisement

Bengaluru: ರೋಡ್‌ ರೇಜ್‌: ಕಾರಿಗೆ ಕಲ್ಲೇಟು, ಮಗುವಿಗೆ ಗಾಯ

03:23 PM Nov 01, 2024 | Team Udayavani |

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಪದೇ ಪದೆ ರೋಡ್‌ ರೇಜ್‌ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಯಾರಾದರೂ ರೋಡ್‌ ರೇಜ್‌ ಪ್ರಕರಣದಲ್ಲಿ ಭಾಗಿಯಾದರೆ, ಅಂತಹ ವ್ಯಕ್ತಿಗಳ ವಿರುದ್ಧ ರೌಡಿಪಟ್ಟಿ ತೆರೆಯುವುದಾಗಿ ನಗರ ಪೊಲೀಸ್‌ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆದರೂ ಇಂತಹ ಪ್ರಕರಣಗಳಿಗೆ ಕಡಿವಾಣ ಬಿದ್ದಿಲ್ಲ.

Advertisement

ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಕಾರೊಂದನ್ನು ಹಿಂಬಾಲಿಸಿ ಅಡ್ಡಗಟ್ಟಿ ಕಾರಿನ ಗಾಜಿಗೆ ಕಲ್ಲು ಹೊಡೆದು ಪುಂಡಾಟ ಮೆರೆದಿದ್ದು, ಘಟನೆಯಲ್ಲಿ 5 ವರ್ಷದ ಬಾಲಕನಿಗೆ ಗಾಯವಾಗಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಸವನಹಳ್ಳಿಯ ಅಮೃತ ಕಾಲೇಜು ಬಳಿ ಬುಧವಾರ ರಾತ್ರಿ ಸುಮಾರು 9.30ಕ್ಕೆ ಘಟನೆ ನಡೆದಿದೆ. ದುಷ್ಕರ್ಮಿಗಳು ಕಾರಿನ ಗಾಜಿಗೆ ಕಲ್ಲು ಹೊಡೆದ ಪರಿಣಾಮ ಕಾರಿನೊಳಗಿದ್ದ 5 ವರ್ಷದ ಬಾಲಕನ ತಲೆಗೆ ಗಾಯವಾಗಿದೆ. ಈ ಸಂಬಂಧ ಅನೂಪ್‌ ಜಾರ್ಜ್‌ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು, ಚೂಡಸಂದ್ರದ ಕೃಷ್ಣಮೂರ್ತಿ(24) ಎಂಬಾತನನ್ನು ಬಂಧಿಸಲಾಗಿದೆ. ಮತ್ತೂಬ್ಬನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಏನಿದು ಘಟನೆ?: ಬೆಳ್ಳಂದೂರು ಬಳಿಯ ಚಿಕ್ಕನಾಯ ಕನಹಳ್ಳಿ ನಿವಾಸಿ, ಐಟಿ ಉದ್ಯೋಗಿ ಅನೂಪ್‌ ಜಾರ್ಜ್‌ ಮತ್ತು ಪತ್ನಿ ಜಿಸ್‌ ಜಾಕೋಬ್‌ ದಂಪತಿ ಇಬ್ಬರು ಮಕ್ಕಳ ಜೊತೆಗೆ ಬುಧವಾರ ದೀಪಾವಳಿ ಶಾಪಿಂಗ್‌ಗೆ ತೆರಳಿದ್ದರು. ಶಾಪಿಂಗ್‌ ಮುಗಿಸಿಕೊಂಡು ಕಾರಿನಲ್ಲಿ ಮನೆಗೆ ತೆರಳುವಾಗ ಕಸವನಹಳ್ಳಿಯ ಅಮೃತ ಕಾಲೇಜಿನ ಬಳಿ ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದ್ದಾರೆ. ಬಳಿಕ ಕಾರಿನ ಬಳಿ ಬಂದು ಕಾರಿನ ಕಿಟಕಿ ಗಾಜು ಇಳಿಸುವಂತೆ ಧಮ್ಕಿ ಹಾಕಿದ್ದಾರೆ.

ಅದರಿಂದ ಆತಂಕಗೊಂಡ ಅನೂಪ್‌, ಕಾರಿನ ಕಿಟಕಿ ಗಾಜು ಇಳಿಸದೆ ವೇಗವಾಗಿ ಮುಂದಕ್ಕೆ ಕಾರನ್ನು ಚಲಾಯಿಸಿದ್ದಾರೆ. ಅಷ್ಟರಲ್ಲಿ ದುಷ್ಕರ್ಮಿಗಳು ರಸ್ತೆ ಬದಿ ಬಿದ್ದಿದ್ದ ಕಲ್ಲು ತೆಗೆದುಕೊಂಡು ಕಾರಿನ ಹಿಂಬದಿ ಸೀಟಿನ ಕಿಟಕಿ ಗಾಜಿಗೆ ಎಸೆದಿದ್ದಾರೆ. ಈ ವೇಳೆ ಕಿಟಕಿ ಗಾಜು ಒಡೆದು ಹಿಂಬದಿ ಸೀಟಿನಲ್ಲಿ ಕುಳಿತ್ತಿದ್ದ 5 ವರ್ಷದ ಬಾಲಕನ ತಲೆಗೆ ಗಂಭೀರ ಗಾಯವಾಗಿದೆ. ಈ ಘಟನೆಯಿಂದ ಆತಂಕಗೊಂಡ ಅನೂಪ್‌ ಹಾಗೂ ಪತ್ನಿ ಜೋರಾಗಿ ಕೂಗಿದ್ದಾರೆ. ಬಳಿಕ ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದರು. ಆದರೆ, ದೂರು ನೀಡಿದ ಕೆಲವೇ ಹೊತ್ತಿನಲ್ಲಿ ಒಬ್ಬನನ್ನು ವಶಕ್ಕೆ ಪಡೆಯ ಲಾಗಿದೆ. ಮತ್ತೂಬ್ಬನಿಗಾಗಿ ಶೋಧ ಕಾರ್ಯ ನಡೆಯು ತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

Advertisement

ಬಾಲಕನ ತಲೆಗೆ ಗಂಭೀರ ಗಾಯ: ಬಳಿಕ ಅನೂಪ್‌ ದಂಪತಿ ಗಾಯಗೊಂಡಿದ್ದ ತಮ್ಮ ಮಗನನ್ನು ಸಮೀ ಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಬಾಲಕನ ತಲೆಯಲ್ಲಿ ಆಗಿದ್ದ ಗಾಯಕ್ಕೆ 3 ಹೊಲಿಗೆ ಹಾಕಿ ಚಿಕಿತ್ಸೆ ನೀಡಿದ್ದಾರೆ. ಇನ್ನು ಮಗಳು ಘಟನೆಯಿಂದ ಗಾಬರಿ ಗೊಂಡಿದ್ದಾಳೆ. ದುಷ್ಕರ್ಮಿಗಳ ಈ ಪುಂಡಾಟದ ಘಟನೆಯನ್ನು ಅನೂಪ್‌ ಪತ್ನಿ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ ದಲ್ಲಿ ವೈರಲ್‌ ಆಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next