Advertisement
ಸುದ್ದಿಗಾರರೊಂದಿಗೆ ಮಾತನಾಡಿ, ರಾಮನಗರ ಪ್ರಭು ಶ್ರೀರಾಮನ ದೇವರ ಪಾದಸ್ಪರ್ಶವಾಗಿರುವ ಪುಣ್ಯ ಕ್ಷೇತ್ರ. ಬ್ರ್ಯಾಂಡ್ ಬೆಂಗಳೂರಿನ ಹೆಸರಿನಲ್ಲಿ ರಾಜಕೀಯ ಉದ್ದೇಶಕ್ಕಾಗಿ ಜಿಲ್ಲೆ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದರು. ರಾಮನಗರ ಹೆಸರಿಗೆ ಯಾರೂ ವಿರೋಧ ಮಾಡಿರಲಿಲ್ಲ. ಇದೀಗ ಯಾಕೆ ಬದಲಾವಣೆ ಮಾಡಲು ಮುಂದಾಗಿದ್ದಾರೆ ಎಂದು ಪ್ರಶ್ನಿಸಿದರು.
ಸದನದಲ್ಲಿ ಮುಡಾ, ವಾಲ್ಮೀಕಿ ನಿಗಮ ಸೇರಿದಂತೆ ವಿವಿಧ ಹಗರಣಗಳ ಬಗ್ಗೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಗ್ಗೂಡಿ ಹೋರಾಟ ನಡೆಸಿದ್ದೇವೆ. ಆದರೆ ಸದನದಲ್ಲಿ ಈ ವಿಚಾರ ಚರ್ಚೆಗೆ ಅವಕಾಶ ಸಿಗದ ಕಾರಣ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಗಿದೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ತಿಳಿಸಿದರು. ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದ್ದ ಜಿಲ್ಲಾ ಜೆಡಿಎಸ್ ಪದಾಧಿಕಾರಿಗಳು ಮತ್ತು ಪ್ರಮುಖ ಮುಖಂಡರ ಸಭೆಯಲ್ಲಿ ಮಾತನಾಡಿ, ಪಾದಯಾತ್ರೆಯ ಪೂರ್ವಭಾವಿ ಸಿದ್ಧತೆ ಬಗ್ಗೆ ಸಭೆ ಮಾಡ್ತಿದ್ದೇವೆ. ರಾಮನಗರ, ಮಂಡ್ಯ, ಮೈಸೂರು ಭಾಗಗಳಲ್ಲಿ ಪ್ರತ್ಯೇಕ ಸಭೆ ನಡೆಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವುದೇ ಕಾರಣಕ್ಕೂ ನಮ್ಮ ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಹೇಳಿದರು.
Related Articles
Advertisement
ತಣಿಯದ ಶಾಸಕ ಜಿಟಿಡಿ ಮುನಿಸು: ಮುಖಂಡರ ಸಭೆಗೆ ಗೈರುಮೈಸೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾದ ಬಳಿಕ ಪಕ್ಷದ ಜತೆ ತುಸು ಮುನಿಸಿಕೊಂಡಂತೆ ಇರುವ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲೆಯ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಗೆ ಗೈರು ಹಾಜರಾಗಿದ್ದರು. ಸ್ಥಳೀಯ ಮಾಜಿ ಶಾಸಕರು, ಹಾಲಿ ಶಾಸಕರು, ಮುಖಂಡರು ಅಲ್ಲದೆ ಜಿಟಿಡಿ ಅವರ ಪುತ್ರ ಶಾಸಕ ಜಿ.ಡಿ.ಹರೀಶ್‌ಗೌಡ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಜಿಟಿಡಿ ಅವರು ಭಾಗವಹಿಸದೇ ಇರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ. ಭಾನುವಾರ ಕೇಂದ್ರದ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ಮುಖಂಡರ ಸಭೆ ನಡೆಸುತ್ತಿದ್ದಾರೆ. ಅದರಲ್ಲಿ ಜಿಟಿಡಿ ಭಾಗವಹಿಸುವರೇ ಎನ್ನುವುದನ್ನು ಕಾದುನೋಡಬೇಕಾಗಿದೆ.