Advertisement

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

02:25 PM Oct 25, 2024 | Team Udayavani |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಅ.28ರಿಂದ (ಸೋಮವಾರ)‌ ಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಯಲಿದ್ದು, ಯಾವುದಾದರೂ ಕಟ್ಟಡ ಕಾನೂನು ಬಾಹಿರವಾಗಿ ನಿರ್ಮಾಣವಾಗುತ್ತಿದೆಯೇ ಎಂದು ಪತ್ತೆ ಹಚ್ಚಲಾಗುವುದು ಎಂದು ಬೆಂಗಳೂರು ಉಸ್ತು ವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

Advertisement

ನಗರದಲ್ಲಿ ಅತಿವೃಷ್ಟಿ ಯಿಂದ ಉದ್ಬವಿಸುವ ಸಮಸ್ಯೆ ಗಳ ಶಾಶ್ವತ ಪರಿಹಾರದ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಬಿಬಿಎಂಪಿ ಹಿರಿಯ ಅಧಿ ಕಾರಿಗಳ ಸಭೆ ನಡೆಸಿ ಬಳಿಕ ಮಾತನಾಡಿದರು. ಅಕ್ರಮ ಕಟ್ಟಡ ನಿರ್ಮಾಣ ತಡೆಯುವ ನಿಟ್ಟಿನಲ್ಲಿ ಕೆಲಸ ನಡೆಯಲಿದೆ. ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್‌ ಮೂಲಕ ಇದರ ಮೇಲ್ವಿಚಾರಣೆ ಮಾಡಲಾಗುವುದು ಎಂದರು.

ಬಿಎಂಆರ್‌ಡಿಎ ಹಾಗೂ ಬಿಎಂಟಿಎಫ್‌ ವ್ಯಾಪ್ತಿ ಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ ಸೇರಲಿದ್ದು, ಈ ಪ್ರದೇಶಗಳಲ್ಲಿ ಅಕ್ರಮ ಕಟ್ಟಡ ನಿರ್ಮಾಣ ನಿಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಚರಂಡಿಗಳ ಹೂಳೆತ್ತಲಾಗುವುದು. ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ತಿಳಿಸಿದರು.

ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಮಿತಿ: ಎಲ್ಲೆಲ್ಲಿ ಮಳೆ ನೀರು ವಸತಿ ಪ್ರದೇಶಗಳಿಗೆ ನುಗ್ಗಿ ಸಮಸ್ಯೆ ಎದುರಾಗುತ್ತಿದೆಯೋ ಅಲ್ಲಿ ಪರಿಹಾರಕ್ಕೆ ಯೋಜನೆ ರೂಪಿಸಿ, ಅದಕ್ಕೆ ಅಗತ್ಯವಿರುವ ಹಣಕಾಸಿನ ಅಂದಾಜನ್ನು ನೀಡಲು ವಲಯವಾರು ಆಯುಕ್ತರು, ಮುಖ್ಯ ಎಂಜಿನಿಯರ್‌ ಹಾಗೂ ಮಳೆನೀರುಗಾಲುವೆ ನಿರ್ವಹಣೆ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಒಂದು ವಾರದ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.

ರಾಜಕಾಲುವೆ ಅಕ್ಕಪಕ್ಕದಲ್ಲಿ 50 ಅಡಿಗಳಷ್ಟು ಅಂತರದಲ್ಲಿ ಯಾರೂ ಕಟ್ಟಡ ಕಟ್ಟು ವಂತಿಲ್ಲ. ಇಂತಹ ಜಾಗವನ್ನು ಗುರುತಿಸಿದ್ದು, ಇಲ್ಲಿ 300 ಕಿ.ಮೀ. ಉದ್ದದ ರಸ್ತೆ ನಿರ್ಮಿಸಲಾಗುವುದು ಎಂದರು.

Advertisement

ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಅಗತ್ಯ ಕ್ರಮ ಕೈಗೊಳ್ಳಲು ನಮಗೆ ಸಂಪೂರ್ಣ ಅಧಿಕಾರವಿದೆ. ಈ ಪರಿಸ್ಥಿತಿಯಲ್ಲಿ ಸರ್ಕಾರ ಯಾವುದೇ ಆಸ್ತಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಕ್ರಮಕೈಗೊಳ್ಳಲು ಅಧಿಕಾರವಿದೆ. ಬಿಎಂಟಿಎಫ್‌, ಬಿಡಿಎ, ಬಿಬಿಎಂಪಿ, ಬಿಎಂಆರ್‌ ಡಿಎಗೆ ಕೆಲವು ತಿದ್ದುಪಡಿ ತಂದು ಅವರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು. ಈ ಹಿಂದೆಯೂ ಅಧಿಕಾರ ವನ್ನು ಸಂಸ್ಥೆಗಳಿಗೆ ನೀಡಲಾಗಿತ್ತು. ಆದರೆ 2020-21ರ ಸಮಯದಲ್ಲಿ ಅದನ್ನು ಹಿಂಪಡೆ ಯಲಾಗಿತ್ತು. ಈಗ ಮತ್ತೆ ನೀಡಲಾಗುತ್ತಿದೆ, ಸುಗ್ರೀವಾಜ್ಞೆ ತರಲು ಗೃಹ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇವೆ. ಈ ವಿಚಾರವಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಅಧಿ ಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next