Advertisement
ನಗರದಲ್ಲಿ ಅತಿವೃಷ್ಟಿ ಯಿಂದ ಉದ್ಬವಿಸುವ ಸಮಸ್ಯೆ ಗಳ ಶಾಶ್ವತ ಪರಿಹಾರದ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಬಿಬಿಎಂಪಿ ಹಿರಿಯ ಅಧಿ ಕಾರಿಗಳ ಸಭೆ ನಡೆಸಿ ಬಳಿಕ ಮಾತನಾಡಿದರು. ಅಕ್ರಮ ಕಟ್ಟಡ ನಿರ್ಮಾಣ ತಡೆಯುವ ನಿಟ್ಟಿನಲ್ಲಿ ಕೆಲಸ ನಡೆಯಲಿದೆ. ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಮೂಲಕ ಇದರ ಮೇಲ್ವಿಚಾರಣೆ ಮಾಡಲಾಗುವುದು ಎಂದರು.
Related Articles
Advertisement
ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಅಗತ್ಯ ಕ್ರಮ ಕೈಗೊಳ್ಳಲು ನಮಗೆ ಸಂಪೂರ್ಣ ಅಧಿಕಾರವಿದೆ. ಈ ಪರಿಸ್ಥಿತಿಯಲ್ಲಿ ಸರ್ಕಾರ ಯಾವುದೇ ಆಸ್ತಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಕ್ರಮಕೈಗೊಳ್ಳಲು ಅಧಿಕಾರವಿದೆ. ಬಿಎಂಟಿಎಫ್, ಬಿಡಿಎ, ಬಿಬಿಎಂಪಿ, ಬಿಎಂಆರ್ ಡಿಎಗೆ ಕೆಲವು ತಿದ್ದುಪಡಿ ತಂದು ಅವರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು. ಈ ಹಿಂದೆಯೂ ಅಧಿಕಾರ ವನ್ನು ಸಂಸ್ಥೆಗಳಿಗೆ ನೀಡಲಾಗಿತ್ತು. ಆದರೆ 2020-21ರ ಸಮಯದಲ್ಲಿ ಅದನ್ನು ಹಿಂಪಡೆ ಯಲಾಗಿತ್ತು. ಈಗ ಮತ್ತೆ ನೀಡಲಾಗುತ್ತಿದೆ, ಸುಗ್ರೀವಾಜ್ಞೆ ತರಲು ಗೃಹ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇವೆ. ಈ ವಿಚಾರವಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಅಧಿ ಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.