Advertisement
ಹೆಸರುಘಟ್ಟ ನಿವಾಸಿ ಮಂಜೇಶ್ ಅಲಿಯಾಸ್ ಹೊಟ್ಟೆ ಮಂಜ ಬಂಧಿತ. ಕೊರಟಗೆರೆ ಠಾಣೆಯ ಕಾನ್ ಸ್ಟೇಬಲ್ ದೊಡ್ಡಲಿಂಗಯ್ಯ ಬಂಧಿಸಿದವರು.
Related Articles
Advertisement
1 ತಿಂಗಳಿನಿಂದ ಕಾರ್ಯಾಚರಣೆ:
ಆರೋಪಿಗಾಗಿ ಸುಮಾರು 1 ತಿಂಗಳ ಕಾರ್ಯಾಚರಣೆ ನಡೆಯುತ್ತಿತ್ತು. ಆದರೆ, ಕಳೆದ 1 ವಾರದಲ್ಲಿ ಆತನ ಚಲನವಲನಗಳ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಆ.6ರಂದು ಬೆಳಗ್ಗೆ 10 ಗಂಟೆಗೆ ಸದಾಶಿವನಗರದ ಟ್ರಾಫಿಕ್ ಸಿಗ್ನಲ್ ಬಳಿ ಮಫ್ತಿಯಲ್ಲಿ ದೊಡ್ಡಲಿಂಗಯ್ಯ ಕಾಯುತ್ತಿದ್ದರು. ಆರೋಪಿ ಮಂಜ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಂತೆ ಆತನನ್ನು ವಾಹನ ಸಮೇತ ತಡೆದು, ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಆಗ ಆರೋಪಿ ಸ್ಕೂಟರ್ ಸಮೇತ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ.
ಆದರೂ ಬಿಡದ ಕಾನ್ ಸ್ಟೇಬಲ್ ದೊಡ್ಡಲಿಂಗಯ್ಯ ಸ್ಕೂಟರ್ ಹಿಡಿದುಕೊಂಡಾಗ, ಅವರನ್ನೇ ಆರೋಪಿ ಸುಮಾರು 50 ಮೀಟರ್ ದೂರ ಎಳೆದೊಯ್ದಿದ್ದಾನೆ. ಬಳಿಕ ಆರೋಪಿಯ ಕಾಲು ಬಿಗಿಯಾಗಿ ಹಿಡಿದು ಕೊಂಡಿದ್ದಾರೆ. ನಂತರ ಅಲ್ಲೇ ಇದ್ದ ಟ್ರಾಫಿಕ್ ಮಹಿಳಾ ಎಎಸ್‌ಐ, ಹೋಮ್‌ಗಾರ್ಡ್ ಹಾಗೂ ಸ್ಥಳೀಯರು ದೊಡ್ಡಲಿಂಗಯ್ಯಗೆ ಸಹಾಯ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ವೇಳೆ ಕೆಲ ಸಾರ್ವಜನಿಕರು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ದೊಡ್ಡಲಿಂಗಯ್ಯ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ಆರೋಪಿ ಕಳ್ಳತನದ ಜತೆಗೆ ವೃದ್ಧಾಪ್ಯ ವೇತನ, ವಿಧವ ವೇತನ ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಿಂಚಣಿ ಯೋಜನೆಗಳ ಕೊಡಿಸುವುದಾಗಿ ಹೇಳಿ ಆಧಾರ್ ಕಾರ್ಡ್, ಪಡಿತರ ಚೀಟು ಮಾಡಿಸು ವುದಾಗಿ ತನ್ನದೇ ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದ. ಬ್ಯಾಂಕ್ ಅಥವಾ ಸರ್ಕಾರಿ ಕಚೇರಿ ಬಳಿ, ಫಲಾನುಭವಿಗಳನ್ನು ಇಳಿಸಿ ಮೈಮೇಲಿದ್ದ ಚಿನ್ನಾಭರಣ ನೋಡಿದರೆ ಸೌಲಭ್ಯ ಕೊಡುವುದಿಲ್ಲ ಎಂದು ಹೇಳಿ ನಂಬಿಸಿ, ತಾನು ಪಡೆದುಕೊಳ್ಳುತ್ತಿದ್ದ. ಬಳಿಕ ಇಲ್ಲದ ಸಬೂಬುಗಳನ್ನು ಹೇಳಿ ಪರಾರಿ ಆಗುತ್ತಿದ್ದ. ಈ ಚಿನ್ನಾಭರಣ ಮಾರಾಟ ಮಾಡಿ ಅದರಿಂದ ಬಂದ ಹಣದಲ್ಲಿ ಗೋವಾಕ್ಕೆ ತೆರಳಿ ಮೋಜು ಮಸ್ತಿ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.
ಸೆರೆ ಹಿಡಿದಿದ್ದು ಹೇಗೆ?
ಸದಾಶಿವನಗರದ ಟ್ರಾಫಿಕ್ ಸಿಗ್ನಲ್ ಬಳಿ ಸ್ಕೂಟರ್‌ನಲ್ಲಿ ಬಂದಿದ್ದ ಕಳ್ಳ
ವಾಹನ ತಡೆದು ವಶಕ್ಕೆ ಪಡೆಯಲು ಮುಂದಾದ ಕಾನ್ ಸ್ಟೇಬಲ್
ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಹೊಟ್ಟೆ ಮಂಜ
ಬಳಿಕ ಸ್ಕೂಟರ್ ಅನ್ನು ಬಿಗಿಯಾಗಿ ಹಿಡಿದುಕೊಂಡ ಕಾನ್ ಸ್ಟೇಬಲ್
ವಾಹನದಲ್ಲೇ ಕಾನ್‌ಸ್ಟೆàಬಲ್ ಅವರನ್ನು 50 ಮೀ. ದೂರಕ್ಕೆ ಎಳೆದೊಯ್ದ ಕಳ್ಳ
ಬಳಿಕ ಅಲ್ಲೇ ಇದ್ದ ಮಹಿಳಾ ಎಎಸ್‌ಐ, ಹೋಮ್‌ಗಾರ್ಡ್ ನೆರವಿನೊಂದಿಗೆ ಕಳ್ಳನ ಸೆರೆ
ಇದೇ ವೇಳೆ ಸಾರ್ವಜನಿಕರಿಂದ ಆರೋಪಿ ಹೊಟ್ಟೆ ಮಂಜನಿಗೆ ಹಿಗ್ಗಾಮುಗ್ಗಾ ಥಳಿತ
ಈ ಅವಕಾಶ ಬಿಟ್ಟಿದ್ದರೆ ಮತ್ತೆ ಆತ ಸಿಗುತ್ತಿರಲಿಲ್ಲ: ಪೊಲೀಸ್ ದೊಡಲಿಂಗಯ್ಯ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾನ್ ಸ್ಟೇಬಲ್ ದೊಡ್ಡಲಿಂಗಯ್ಯ, ಈ ಅವಕಾಶವನ್ನು ನಾನು ಬಿಟ್ಟಿದ್ದರೆ, ಮತ್ತೆ ಯಾವುತ್ತು ಆತನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. 1 ತಿಂಗಳಿಂದ ಮನೆ ಬಿಟ್ಟು ಬಂದು ಆತನಿಗಾಗಿ ಬೆಂಗಳೂರಿನಲ್ಲಿ ಶೋಧ ನಡೆಸುತ್ತಿದ್ದೇವೆ. ಆತ ಮುಖಕ್ಕೆ ಮಾಸ್ಕ್ ಹಾಗೂ ಹೆಲ್ಮೆಟ್ ಹಾಕಿಕೊಂಡು ಓಡಾಡುತ್ತಿದ್ದ. ಅದರಿಂದ ಆತನ ಪತ್ತೆ ಕಾರ್ಯ ಕಷ್ಟವಾಗಿತ್ತು. ಆದರೆ, ಕೆಲ ಮಾಹಿತಿ ದೊರೆತ ಆಧಾರದ ಮೇಲೆ ನಿರ್ದಿಷ್ಟ ಸಿಗ್ನಲ್ ಬಳಿ ಕಾಯ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದರು.