Advertisement

Bengaluru: ಕಮಲಾನಗರದಲ್ಲಿ 3 ಅಂತಸ್ತಿನ ಕಟ್ಟಡ ಅಡಿಪಾಯ ದಿಢೀರ್‌ ಕುಸಿತ

11:39 AM Oct 25, 2024 | Team Udayavani |

ಬೆಂಗಳೂರು: ಮಹಾಲಕ್ಷ್ಮೀಲೇಔಟ್‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಲಾನಗರದಲ್ಲಿ ತಳಪಾಯದ ಗೋಡೆ ಶೇ.20 ರಷ್ಟು ಕುಸಿದಿದ್ದು, ಶುಕ್ರವಾರ ತೆರವು ಕಾರ್ಯವನ್ನು ಪ್ರಾರಂಭಿಸಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಕಮಲಾನಗರ 3ನೇ ಮುಖ್ಯರಸ್ತೆಯ ಬಳಿ ದ್ವೀತೀಯ ನೀರುಗಾಲುವೆಗೆ ಹೊಂದಿ ಕೊಂಡಂತಿರುವ 3 ಅಂತಸ್ತಿನ ಮನೆಯ ತಳಭಾಗದಲ್ಲಿ ದ್ವಿತೀಯ ನೀರು ಗಾಲುವೆಯ ಮೂಲಕ ಬರುವ ನೀರು ಮನೆಯ ತಳಪಾಯ ಸೇರಿದೆ. ಆ ಹಿನ್ನೆಲೆಯಲ್ಲಿ ತಳಪಾಯದ ನೀರಿನ ಸಂಪ್‌(ನೀರಿನ ಟ್ಯಾಂಕ್‌) ಹಾಗೂ ಶೇ. 20 ರಷ್ಟು ತಳಪಾಯದ ಗೋಡೆ ಕುಸಿದಿರುತ್ತದೆ.

ಈ ಸಂಬಂಧ ಮನೆಯ ಬಳಿ ವಲಯ ಆಯುಕ್ತರಾದ ಅರ್ಚನಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಗಳ ಸ್ಥಳಾಂತರ: 3 ಅಂತಸ್ತಿನ ಕಟ್ಟಡದಲ್ಲಿ 5 ಮನೆಗಳಿದ್ದು, ಎಲ್ಲಾ ಮನೆಗಳನ್ನು ಬಾಡಿಗೆಗೆ ನೀಡಲಾಗಿರುತ್ತದೆ. ತಳಪಾಯದ ಗೋಡೆ ಕುಸಿದಿರುವ ಪರಿಣಾಮ ಮನೆಗಳಲ್ಲಿದ್ದ ಎಲ್ಲಾ ಕುಟುಂಬಸ್ಥರನ್ನು ಸ್ಥಳಾಂತರಿಸಲಾಗಿದೆ.

ಮನೆಯಲ್ಲಿದ್ದ ಎಲ್ಲಾ ಸಾಮಗ್ರಿಗಳನ್ನು ಹೊರ ತೆಗೆಯಲಾಗಿದೆ. 5 ಕುಟುಂಬಗಳ ಪೈಕಿ, 3 ಕುಟುಂಬಗಳು ಸಂಬಂಧಿಕರ ಮನೆಗೆ ತೆರಳಿದ್ದು, 1 ಕುಟುಂಬ ಅಂಬೇಡ್ಕರ್‌ ಭವನ, ಇನ್ನೊಂದು ಕುಟುಂದ ದೇವಸ್ಥಾನದಲ್ಲಿ ತಂಗಿದ್ದು, ಅವರಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸುರಕ್ಷತೆಯ ದೃಷ್ಟಿಯಿಂದ ಎದುರು ಮನೆಯ ವರನ್ನು ಕೂಡ ಖಾಲಿ ಮಾಡಿಸಲಾಗಿದ್ದು, ಮನೆಗೆ ಸಂಪರ್ಕವಿದ್ದ ವಿದ್ಯುತ್‌ ಸ್ಥಗಿತಗೊಳಿಸಲಾಗಿದೆ.ಪಾಲಿಕೆ ಮತ್ತು ಪೊಲೀಸ್‌ ಸಿಬ್ಬಂದಿ ಸ್ಥಳದಲ್ಲಿದ್ದು, ಕಟ್ಟಡವು ವಾಸಕ್ಕೆ ಯೋಗ್ಯವಾಗಿಲ್ಲದ ಪರಿಣಾಮ ಶುಕ್ರವಾರ ಕಟ್ಟಡವನ್ನು ನೆಲಸಮ ಮಾಡಲಾಗುವುದು ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next