Advertisement
ಹೆಸರಘಟ್ಟ ಹೋಬಳಿಯ ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ.ಎಂ.ಜಿ. ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ನ್ಯಾಯಾಲಯದ ಆದೇಶದಿಂದಾಗಿ ತನಿಖೆಗೆ ಹಾದಿ ಸುಗಮವಾಗಿದ್ದು, ಆರೋಪಿಗಳು ತನಿಖೆಯನ್ನು ಎದುರಿಸಲೇಬೇಕಾಗಿದೆ.
Related Articles
Advertisement
ಪ್ರಕರಣದ ಹಿನ್ನೆಲೆ: ಶಾಸಕ ವಿಶ್ವನಾಥ್ ಅವರನ್ನು ಮುಗಿಸು ವುದಾಗಿ ಆರೋಪಿ ಎಂ.ಎನ್. ಗೋಪಾಲಕೃಷ್ಣ ಹಾಗೂ ಮತ್ತೋರ್ವ ವ್ಯಕ್ತಿ ಮಾತನಾಡಿದ್ದ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದನ್ನು ಆಧರಿಸಿ ವಿಶ್ವನಾಥ್ 2021ರ ಡಿ.1ರಂದು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸಲ್ಲಿಸಿದ ದಿನವೇ ಶಾಸಕರ ಕಚೇರಿಗೆ ಒಂದು ಲಕೋಟೆ ಬಂದಿತ್ತು. ಅದರಲ್ಲಿ ಪೆನ್‌ಡ್ರೈವ್ ಹಾಗೂ ಬೆದರಿಕೆ ಪತ್ರ ಇತ್ತು. ಪೊಲೀಸರು ತನಿಖೆಗಾಗಿ ಅದನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಮಧ್ಯೆ, ಆ ದೂರನ್ನು ರದ್ದುಗೊಳಿಸುವಂತೆ ಕೋರಿ ಗೋಪಾಲಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದರು. ಆಗ ನ್ಯಾಯಾಲಯ 2022ರ ಸೆ.27ರಂದು ಅರ್ಜಿಯನ್ನು ಮಾನ್ಯ ಮಾಡಿ ತಾಂತ್ರಿಕ ಕಾರಣಗಳಿಂದಾಗಿ ದೂರು ಸಲ್ಲಿಸಿರುವ ಪ್ರಕ್ರಿಯೆ ಸರಿಯಾಗಿಲ್ಲ. ಹಾಗಾಗಿ ಪ್ರಕರಣವನ್ನು ರದ್ದುಗೊಳಿಸಲಾಗುತ್ತಿದೆ. ಆದರೆ ಅರ್ಜಿದಾರರು ಹೊಸದಾಗಿ ದೂರು ಸಲ್ಲಿಸಲು ಸ್ವತಂತ್ರರು ಎಂದು ಆದೇಶ ನೀಡಿತ್ತು.
ಆನಂತರ ವಿಶ್ವನಾಥ್ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು. ಆದರೆ ಪೊಲೀಸರು ಆ ದೂರು ಸ್ವೀಕರಿಸಲು ನಿರಾಕರಿಸಿದರು. ಹಾಗಾಗಿ ಸಾಕ್ಷÂಗಳನ್ನು ಆಧರಿಸಿ ವಿಶ್ವನಾಥ್, ಗೋಪಾಲಕೃಷ್ಣ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ, ಮೇಲ್ನೋಟಕ್ಕೆ ಆರೋಪದಲ್ಲಿ ಹುರುಳಿದೆ ಎಂದು ಅಭಿಪ್ರಾಯಪಟ್ಟು ಆರೋಪಿ ವಿರುದ್ಧ ತನಿಖೆ ನಡೆಸುವಂತೆ ರಾಜಾನುಕುಂಟೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಹಾಗಾಗಿ ಗೋಪಾಲಕೃಷ್ಣ ತನಿಖೆಗೆ ತಡೆ ನೀಡಬೇಕು ಮತ್ತು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.