Advertisement

Bengaluru: ಚಕ್ರ ವಾಹನಗಳು, ಮನೆ ಕಳ್ಳತನ: ಮೂವರು ಆರೋಪಿಗಳ ಬಂಧನ

02:38 PM Dec 01, 2024 | Team Udayavani |

ಬೆಂಗಳೂರು: ದ್ವಿಚಕ್ರ ವಾಹನ ಮತ್ತು ಮನೆ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜರಗನಹಳ್ಳಿಯ ದೀಪಕ್‌ ಅಲಿಯಾಸ್‌ ದೀಪು (23), ಬನ್ನೇರುಘಟ್ಟ ಮುಖ್ಯ ರಸ್ತೆಯ ಶಾನುಭೋಗನಹಳ್ಳಿಯ ಜೈದೀಪು ಅಲಿಯಾಸ್‌ ಜಂಗ್ಲಿ (24) ಹಾಗೂ ವಾಜರಹಳ್ಳಿಯ ಅದ್ವೆ„ತ್‌ ಗೌಡ (23) ಬಂಧಿತರು. ಆರೋಪಿ ಗಳಿಂದ ಸುಮಾರು 11 ಲಕ್ಷ ರೂ. ಮೌಲ್ಯದ 130 ಗ್ರಾಂ ಚಿನ್ನಾಭರಣ ಹಾಗೂ 3 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

Advertisement

ಸೆಪ್ಟೆಂಬರ್‌ನಲ್ಲಿ ಮಂಗನಹಳ್ಳಿಯ ಸರ್‌ ಎಂ.ವಿಶ್ವೇಶ್ವರಯ್ಯ ಲೇಔಟ್‌ ನಿವಾಸಿ ಖಾಲಿದ್‌ ನಯಾಜ್‌ ಖಾನ್‌ ಎಂಬುವರ ಮನೆಯ ಬೀಗ ಮುರಿದ ದುಷ್ಕರ್ಮಿಗಳು ನಗದು, ಚಿನ್ನಾಭರಣ ಹಾಗೂ ದ್ವಿಚಕ್ರ ವಾಹನ ಕಳವು ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಪ್ರಮುಖ ಆರೋಪಿ ರಘು ಅಲಿಯಾಸ್‌ ಪೆಪ್ಸಿ ಎಂಬಾತನನ್ನು ಬಂಧಿಸಲಾಗಿತ್ತು. ಬಳಿಕ ಈತನ ಹೇಳಿಕೆ ಆಧರಿಸಿ ತಲೆಮರೆಸಿಕೊಂಡಿದ್ದ ಮೂವರನ್ನು ಇದೀಗ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಅಪರಾಧ ಹಿನ್ನೆಲೆವುಳ್ಳವರಾಗಿದ್ದಾರೆ. ಈ ಹಿಂದೆ ನಗರದ ವಿವಿಧೆಡೆ ಅಪರಾಧ ಪ್ರಕರಣಗಳಲ್ಲಿ ದಾಖಲಾಗಿ ದ್ದಾರೆ. ಹಲವು ಪ್ರಕರಣಗಳಲ್ಲಿ ಬಂಧಿತರಾಗಿ ಜೈಲು ಸೇರಿ ಬಳಿಕ ಜಾಮೀನು ಪಡೆದು ಹೊರಗೆ ಬಂದು ಮತ್ತೆ ಕಳ್ಳತನ ಕೃತ್ಯ ಮುಂದುವರಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಆರೋಪಿಗಳ ಬಂಧನದಿಂದ ಬ್ಯಾಡರಹಳ್ಳಿ, ಸುಬ್ರಮಣ್ಯಪುರ, ಕುಂಬಳಗೋಡು, ಕೋಣನ ಕುಂಟೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ತಲಾ ಒಂದು ಮನೆಗಳವು ಹಾಗೂ ಹನುಮಂತನಗರ 2 ಹಾಗೂ ಆರ್‌.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ದ್ವಿಚಕ್ರ ವಾಹನ ಕಳವು ಸೇರಿ ಒಟ್ಟು 7 ಅಪರಾಧ ಪ್ರಕರಣಗಳು ಪತ್ತೆಯಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next