Advertisement

ಬೆಂಗಳೂರು ವಿಶ್ವವಿದ್ಯಾಲಯದ ನೌಕರರಿಗೆ ಷರತ್ತು ಬದ್ಧ ವರ್ಕ್‌ ಫ್ರಂ ಹೋಮ್‌

10:45 PM Apr 27, 2021 | Team Udayavani |

ಬೆಂಗಳೂರು : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊರೊನಾ ಕರ್ಫ್ಯೂ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಬೋಧಕ, ಬೋಧಕೇತರಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿದೆ.

Advertisement

ಏ.28ರಿಂದ ಮೇ 11ರವರೆಗೆ ವಿವಿಯಲ್ಲಿ ಅಭಿಯಂತರ ವಿಭಾಗ, ಆರೋಗ್ಯ ವಿಭಾಗ, ಸಾರಿಗೆ ವಿಭಾಗ ಹೊರತು ಪಡಿಸಿ ಉಳಿದ ಎಲ್ಲ ವಿಭಾಗದವರು ಮನೆಯಿಂದಲೇ ಕೆಲಸ ನಿರ್ವಹಿಸಬೇಕು. ಈ ವೇಳೆ ಎಲ್ಲ ಸಿಬ್ಬಂದಿ ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಲು ಅವರ ದೂರವಾಣಿ ಸಂಖ್ಯೆಯನ್ನು ಮೇಲಧಿಕಾರಿಗಳಿಗೆ ನೀಡಬೇಕು. ಈ ಅವಧಿಯಲ್ಲಿ ಬೋಧಕೇತರ ಸಿಬ್ಬಂದಿ ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ. ವಿವಿ ಸಿಬ್ಬಂದಿ ಸೇವೆ ಅಗತ್ಯವಿದ್ದಾಗ ಸಂಬಂಧಪಟ್ಟ ವಿಭಾಗ, ಕಚೇರಿಯ ಮುಖ್ಯಸ್ಥರು ಇಚ್ಛಿಸಿದಲ್ಲಿ ಅವರು ಸೂಚಿಸುವ ಅಧಿಕಾರಿ, ಬೋಧಕ, ಬೋಧಕೇತರ ನೌಕರರು ಯಾವುದೇ ಕಾರಣ ನೀಡದೆಯೇ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ :ಕಳವು ಮಾಡಿ ಸಿಕ್ಕಿಬಿದ್ದ ಪಾಕಿಸ್ತಾನದ ಇಬ್ಬರು ರಾಜತಾಂತ್ರಿಕ ಅಧಿಕಾರಿಗಳು!

ಸಲಹೆ ಹಾಗೂ ಮಾರ್ಗದರ್ಶನ:
ಹಾಗೆಯೇ ವಿದ್ಯಾರ್ಥಿಗಳು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ಕೊರೊನಾ ಬಗ್ಗೆ ಮಾನಸಿಕ ಆರೋಗ್ಯ ಕಾಪಾಡಲು ಮತ್ತು ಸ್ಥೈರ್ಯ ತುಂಬಲು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮನೋವಿಜ್ಞಾನ ಸಲಹಾ ಮತ್ತು ಮಾರ್ಗದರ್ಶನಕ್ಕಾಗಿ ಸಹಾಯವಾಣಿ ವ್ಯವಸ್ಥೆ ಮಾಡಿದೆ.

ಡಾ.ವಿಕ್ಟರ್‌ ರಾಜ್‌  94431 95150, ಡಾ.ಮ್ಯಾಕ್ಸಿಮ್ ಪಿರೇರಾ 94812 44374, ಡಾ.ರಶ್ಮಿ 99002 26829, ಸುದರ್ಶನ್‌ ಹೆಬ್ಟಾನಿ  99166 28323, ಶ್ರೀತಾ ಸ್ಯಾಂಡನ್‌  99802 85644, ಡಾ.ಸುಧಮಯಿ 70222 70876 ಈ ದೂರವಾಣಿ ಸಂಖ್ಯೆಗೆ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿ ಕರೆ ಮಾಡಿ ಆಪ್ತ ಸಮಾಲೋಚನೆ, ಸೂಕ್ತ ಮಾರ್ಗದರ್ಶನ ಪಡೆದುಕೊಳ್ಳಬಹುದು. ವಿವಿಯ ವ್ಯಾಪ್ತಿಯ ಎಲ್ಲ ಕಾಲೇಜುಗಳ ಸಿಬ್ಬಂದಿ, ವಿದ್ಯಾರ್ಥಿಗಳು ಇದರ ಅನುಕೂಲ ಪಡೆದುಕೊಳ್ಳುವಂತೆ ಕುಲಪತಿ ಡಾ.ಟಿ.ಡಿ.ಕೆಂಪರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next