Advertisement
ನಗರದ ಕಾಡುಗೊಂಡನಹಳ್ಳಿ ಮತ್ತು ದೇವರ ಜೀವನ ಹಳ್ಳಿ ಗಲಭೆಗೆ ಸಂಬಂಧಿಸಿ ಪೊಲೀಸರು ಸುಮಾರು ಮುನ್ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಪೋಷಕರು ಠಾಣೆಯ ಮುಂದೆ ತಮ್ಮ ಮಕ್ಕಳನ್ನು ಬಿಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.
ನಗರದ ಕಾಡುಗೊಂಡನಹಳ್ಳಿ ಮತ್ತು ದೇವರ ಜೀವನ ಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆಯ ತನಿಖೆ ಮುಂದುವರಿದಿದ್ದು, ಆಗಸ್ಟ್ 18ರ ವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಗೃಹ ಸಚಿವ, ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಪರಿಸ್ಥಿತಿ ಶಾಂತಾವಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಆಗಸ್ಟ್ 18ವರೆಗೂ ನಿಷೇಧಾಜ್ಞೆ ಇರಲಿದೆ. ಪ್ರಕರಣದ ಬಗ್ಗೆ ತನಿಖೆ ಮುಂದುವರೆಯಲಿದೆ ಎಂದು ಹೇಳಿದರು.