Advertisement
ಈ ಬಗ್ಗೆ ಮಾತನಾಡಿರುವ ಬಿಐಎಎಲ್ ಸಿಇಒ ಜಯರಾಜ್ ಷಣ್ಮುಗಂ, ಬೆಂಗಳೂರು ವಿಮಾನ ನಿಲ್ದಾಣದ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್‌ನನ್ನು ಪರಿಚಯಿಸಲಾಗುತ್ತಿದೆ. ಇದು ಯಾವುದೇ ರೀತಿಯ ಅಗ್ನಿ ಅವಘಡವಾದರೂ ಕೂಡಲೇ ಅದನ್ನು ಆರಿಸುವ ಕೆಲಸದಲ್ಲಿ ನಿಪುಣತೆ ಹೊಂದಿದೆ. ಈ ಅತ್ಯಾಧುನಿಕ ತಂತ್ರಜ್ಞಾನದ ಅಗ್ನಿಶಾಮಕವನ್ನು ಭಾರತದ ಯಾವುದೇ ವಿಮಾನ ನಿಲ್ದಾಣದ ತಂಡ ಇಲ್ಲಿಗೆ ಆಗಮಿಸಿ ಇದರ ತರಬೇತಿ ಪಡೆಯಲು ಸಹ ಮುಕ್ತ ಅವಕಾಶವನ್ನು ಒದಗಿಸಿಕೊಡಲಾಗಿದೆ ಎಂದರು.
Related Articles
Advertisement
ವಿಮಾನ ನಿಲ್ದಾಣದಲ್ಲಿರುವ ಅಗ್ನಿಶಾಮಕ ದಳದವರಿಗೆ ಈ ಸಿಮ್ಯುಲೇಟರ್‌ನನ್ನು ಬಳಸುವ ವಿಧಾನವನ್ನು ತರಬೇತಿ ನೀಡಲಾಗಿದೆ. ಅದರಲ್ಲೂ ಕಮಾಂಡ್ ನಿಯಂತ್ರಕರು, ಮೂಲ ಚಾಲಕರು, ಪೋಸಿಶನಿಂಗ್ ಇನ್ಸಿಡೆಂಟ್ ಕಮಾಂಡರ್‌ಗಳು, ಕ್ಯೂ ಕಮಾಂಡರ್‌ಗಳು ಹಾಗೂ ಅಗ್ನಿಶಾಮಕ ಮುಂಚೂಣಿ ಸಿಬ್ಬಂದಿಗೆ ಈ ತರಬೇತಿಯನ್ನು ಕಡ್ಡಾಯವಾಗಿ ನೀಡಲಾಗುವುದು ಎಂದು ವಿವರಿಸಿದ್ದಾರೆ.