ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಪ್ರಶಸ್ತಿಗೆ ಆಯ್ಕೆ ಆಗಿದೆ.
ಏರ್ ಪೋರ್ಟ್‌ಸ್ ಕೌನ್ಸಿಲ್ ಇಂಟರ್ ನ್ಯಾಷನಲ್ ವರ್ಲ್x (ಎಸಿಐ) ಕೊಡಮಾಡುವ ಗ್ರಾಹಕ ಕೇಂದ್ರಿತ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಶ್ರೇಯಸ್ಸಿಗೆ ಭಾಜನವಾಗಿದೆ.
ಪ್ರಯಾಣಿಕರಿಂದಲೇ ಆಯ್ಕೆ ಆಗುವ ಈ ಪ್ರಶಸ್ತಿಗೆ ಜಾಗತಿಕವಾಗಿ 15 ವಿಮಾನ ನಿಲ್ದಾಣಗಳು ಪಾಲ್ಗೊಂಡಿದ್ದವು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಲಿಮಿ ಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅತ್ಯುತ್ತಮ ವಿಮಾನ ನಿಲ್ದಾಣ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ ಎಂದಿದ್ದಾರೆ.
ಈ ಪ್ರಶಸ್ತಿ ನಮ್ಮ ತಂಡದ ಕಠಿನ ಪರಿಶ್ರಮ, ಸಮರ್ಪಣೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ. ಕಸ್ಟಮ್ಸ… ಮತ್ತು ಸಿಬಂದಿ ಸಹಕಾರವೂ ದೊಡ್ಡದಿದೆ. ತಡೆರಹಿತ ಆಗಮನ ಪ್ರಕ್ರಿಯೆಯನ್ನು ಸಕ್ರಿಯಗೊಳಿಸುವಲ್ಲಿ ಅವರ ಸಹ ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ಜತೆಗೆ ಪ್ರಯಾಣಿಕರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಮತ್ತಷ್ಟು ಸಾಧನೆ ಮಾಡಲು ಈ ಪ್ರಶಸ್ತಿ ಪ್ರೇರಣೆ ನೀಡಲಿದೆ ಎಂದು ಹೇಳಿದ್ದಾರೆ.