Advertisement
ಪ್ರಕರಣವನ್ನು ರದ್ದು ಮಾಡಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ ಹೋಬಳಿಯ ಬೆನ್ನಿಗಾನಹಳ್ಳಿಯಲ್ಲಿನ ಸರ್ವೆ ನಂ.50/2ರಲ್ಲಿನ 4 ಎಕರೆ 20 ಗುಂಟೆ ಜಮೀನನ್ನು ಡಿ.ಕೆ. ಶಿವಕುಮಾರ್ ನಗರಾಭಿವೃದ್ಧಿ ಸಚಿವರಾಗಿದ್ದಾಗ ಖರೀದಿಸಿದ್ದರು. ನಂತರ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಎಲ್ಲ ದಾಖಲೆಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳಿಂದ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದರು. ಬಳಿಕ ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಮನವಿ ಮೇರೆಗೆ ಈ ಜಾಗವನ್ನು ಅಕ್ರಮವಾಗಿ ಡಿ ನೋಟಿಫಿಕೇಷನ್ ಮಾಡಿಸಿದ್ದಾರೆ ಎಂದು ಆರೋಪಿಸಿ ಟಿ.ಜೆ. ಅಬ್ರಾಹಾಂ ಮತ್ತು ಕಬ್ಬಾಳೆಗೌಡ ಎಂಬುವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.