ಚಿತ್ರದುರ್ಗ: ಹೊಸದುರ್ಗ ಪಟ್ಟಣದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದು ಬೆಸ್ಕಾಂ ಎಇಇ ತಿರುಪತಿ ನಾಯ್ಕ್ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ.
Advertisement
ವಿದ್ಯುತ್ ಗುತ್ತಿಗೆದಾರ ಕುಮಾರ್ ಬಳಿ 20ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, 10ಸಾವಿರ ರೂ.ಲಂಚ ಸ್ವೀಕಾರ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಸರ್ವೀಸ್ ಕನೆಕ್ಷನ್ ಗಾಗಿ ಎಇಇ ಲಂಚಕ್ಕೆ ಬೇಡಿಯಿಟ್ಟಿದ್ದಾಗಿ ತಿಳಿದು ಬಂದಿದೆ. ಲೋಕಾಯುಕ್ತ ಎಸ್ಪಿ ವಾಸುದೇವ್, ಡಿವೈಎಸ್ಪಿ ಮೃತ್ಯುಂಜಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.