Advertisement
ಮಂಗಳವಾರ ರಾತ್ರಿ ಬೆಸ್ಕಾಂನ ಎಲ್ಲ ಮುಖ್ಯ ಇಂಜಿನಿಯರ್, ಅಧೀಕ್ಷಕ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಳಿಗೆ ಪರಿಸ್ಥಿತಿ ನಿಭಾಯಿಸಲು ಸೂಚನೆ ನೀಡಿದ ಅವರು ವಿದ್ಯುತ್ ವ್ಯತ್ಯಯದ ಕುರಿತು ಮೇಲ್ವಿಚರಣೆ ಮತ್ತುಕಾಮಗಾರಿ ಮೇಲೆ ನಿಗಾವಹಿಸಿದರು. ಬೆಸ್ಕಾಂ ಎಂಡಿ ಖುದ್ದು ನಿರ್ವಹಣೆಯಿಂದಾಗಿ ಮಂಗಳವಾರ ರಾತ್ರಿಯೇ ವಿದ್ಯುತ್ ವ್ಯತ್ಯಯವನ್ನು ಕೆಲವಡೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗಿತ್ತು.
Related Articles
Advertisement
ವಿದ್ಯುತ್ ಪೂರೈಕೆಯಲ್ಲಾಗಿರುವ ಅಡಚಣೆ ಮತ್ತು ಅದನ್ನು ಸರಿಪಡಿಸಲು ಬೆಸ್ಕಾಂ ಸಿಬ್ಬಂದಿ ವಹಿಸಿರುವ ಕ್ರಮಗಳ ಕುರಿತು, ಬೆಸ್ಕಾಂ ಎಂಡಿ ಮೇಲ್ವಿಚಾರಣೆ ಮಾಡಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.ರಾಜರಾಜೇಶ್ವರಿ ನಗರದ ಕೆಂಚನಹಳ್ಳಿ ಸಮೀಪದ ಅಪಾರ್ಟ್ ಮೆಂಟ್ ಒಂದರ ನಿವಾಸಿಗಳ ಜತೆ ಬೆಸ್ಕಾಂ ಎಂಡಿ ಮಾತುಕತೆ ನಡೆಸಿದರು. ಭಾರೀ ಮಳೆಯಿಂದಾಗಿ ಅಪಾರ್ಟ್ ಮೆಂಟ್ ಜಲಾವೃತವಾಗಿತ್ತು. ಕೆಂಚನಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯ ಸರಿಪಡಿಸುವ ಕಾಮಗಾರಿಯ ಪರಿಶೀಲನೆ ನಡೆಸಿದರು. ಇದನ್ನೂ ಓದಿ : ಚಿಕ್ಕಮಗಳೂರಿನ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಿಎಂ ಬೊಮ್ಮಾಯಿ ಮಳೆಯಿಂದಾದ ನಿಕರ ಹಾನಿ ಮತ್ತು ವಿದ್ಯುತ್ ವ್ಯತ್ಯಯ ಕುರಿತು ಬೆಸ್ಕಾಂ ಎಂಡಿ ಬೆಸ್ಕಾಂ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಜೊತೆಗೆ ವಿದ್ಯುತ್ ವ್ಯತ್ಯಯನ್ನು ಸರಿಪಡಿಸಿ, ವಿದ್ಯುತ್ ಪೂರೈಕೆಯನ್ನು ಪುನರ್ ಸ್ಥಾಪಿಸಿರುವ ಪ್ರದೇಶಗಳ ಮಾಹಿತಿ ಪಡೆದರು. ಮಳೆಯ ನಡುವೆಯೇ, ಬೆಸ್ಕಾಂ ಸಿಬ್ಬಂದಿ ಮಂಗಳವಾರ ರಾತ್ರಿ ಇಡೀ ಕಾರ್ಯಚರಣೆ ನಡೆಸಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಂಡಿರುವ ಬೆಸ್ಕಾಂ ಲೈನ್ ಮನ್ ಗಳ ಕಾರ್ಯವನ್ನು ರಾಜೇಂದ್ರ ಚೋಳನ್ ಶ್ಲಾಘಿಸಿದರು. ಈ ಸಂದರ್ಭ ದಲ್ಲಿ ಲೈನ್ ಮೆನ್ ಸಿಬ್ಬಂದಿ ಜತೆಗೆ ಮಾತುಕತೆ ನಡೆಸಿದ ಅವರು ಸುರಕ್ಷತಾ ಕ್ರಮಗಳನ್ನು ಬಳಸಿಕೊಂಡು ಸೇವೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು. ಭಾರೀ ಮಳೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಿದ್ದು, ನಿನ್ನೆ ರಾತ್ರಿ ನೇ ಕೆಲವಡೆ ಸಂಪರ್ಕ ಮರು ಸ್ಥಾಪಿಸಲಾಗಿದ್ದು, ಕೆಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ ವಿದ್ಯುತ್ ಸಂಪರ್ಕ ಸರಿಪಡಿಸಲಾಗಿದೆ. ವಿದ್ಯುತ್ ವ್ಯತ್ಯಯ ವಿವರ: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಸ್ಕಾಂ ಸಹಾಯವಾಣಿ 1912 ಗೆ ಮಂಗಳವಾರ ರಾತ್ರಿ 13734 ಕರೆಗಳು ಬಂದಿದ್ದು, ಈ ಪೈಕಿ 13165 ಕರೆಗಳು ಪವರ್ ಕಟ್ ಗೆ ಸಂಬಂಧಿಸಿದೆ. ಬೆಂಗಳೂರು ನಗರ ಜಿಲ್ಲೆಯ ಬೆಸ್ಕಾಂ ವಿಭಾಗದಲ್ಲಿ ಒಟ್ಟು 107 ಫೀಡರ್ ಗಳು ತೊಂದರೆಗೊಳಗಾಗಿದ್ದು. ಮಲ್ಲೇಶ್ವರಂ- 12, ಹೆಬ್ಬಾಳ- 13, ಕೆಂಗೇರಿ-7, ರಾಜಾಜಿನಗರ-4, ಪೀಣ್ಯ-4, ರಾಜರಾಜೇಶ್ವರಿನಗರ-1, ಹೆಚ್ ಎಸ್ ಆರ್ ಬಡಾವಣೆ -20, ಇಂದಿರಾನಗರ – 4, ಜಾಲಹಳ್ಳಿ 9, ಜಯನಗರ 12, ಕೋರಮಂಗಲ 8, ಶಿವಾಜಿನಗರ 8, ವಿಧಾನಸೌಧ- 2 ಮತ್ತು ವೈಟ್ ಫಿಲ್ಡ್ ನಲ್ಲಿ 3 ಫೀಡರ್ ಗಳು ಮಳೆ, ಗುಡುಗು-ಸಿಡಿಲು ಗೆ ಟ್ರಿಪ್ ಆಗಿತ್ತು.
ಬೆಸ್ಕಾಂ ಸಿಬ್ಬಂದಿ ಬುಧವಾರ ಬೆಳಗ್ಗೆ ವೇಳೆಗೆ ಎಲ್ಲ ಫೀಡರ್ ಗಳನ್ನು ದುರಸ್ಥಿ ಮಾಡಿ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ ಎಂದು ಬೆಸ್ಕಾಂ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.