Advertisement

ಪಶು ಕಲ್ಯಾಣ ಸಹಾಯವಾಣಿಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ : ಸಚಿವ ಪ್ರಭು ಚವ್ಹಾಣ್

06:40 PM Jul 24, 2021 | Team Udayavani |

ಬೆಂಗಳೂರು: ಪಶು ಕಲ್ಯಾಣ ಸಹಾಯವಾಣಿಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ದೊರೆತಿದ್ದು ಪ್ರಾಣಿಗಳ ಆರೋಗ್ಯ ಮತ್ತು ಪಶುವೈದ್ಯಕೀಯ ಸೇವೆಗಳು, ಪಶುಸಂಗೋಪನೆ ಸೇವೆಗಳು, ಪ್ರಾಣಿ ಕಲ್ಯಾಣ ಮತ್ತು ಕ್ರೌರ್ಯ ತಡೆಗಟ್ಟುವಿಕೆ, ಸ್ವಯಂ ಉದ್ಯೋಗದ ಮಾಹಿತಿ ಬಗ್ಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

ಕಳೆದ ಒಂದು ತಿಂಗಳಲ್ಲಿ ಪ್ರಾಣಿ ಕಲ್ಯಾಣ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದ್ದು ರಾಜ್ಯದ ಎಲ್ಲ ಜಿಲ್ಲೆಗಳಿಂದ ಉತ್ತಮ ಸ್ಪಂದನೆ ದೊರಕಿದೆ. ಬೆಂಗಳೂರು ನಗರ, ಬೆಳಗಾವಿ, ಬಳ್ಳಾರಿ, ಕಲಬುರ್ಗಿ ಮತ್ತು ತುಮಕೂರು ಜಿಲ್ಲೆಗಳಿಂದ ಹೆಚ್ಚಿನ ಕರೆಗಳು ಬಂದಿವೆ. ಒಂದು ತಿಂಗಳಲ್ಲಿ  9 ಸಾವಿರ ಕರೆಗಳು ವಾರ್ ರೂಮ್ ಗೆ ಬಂದಿದ್ದು ಎಲ್ಲ ಕರೆಗಳನ್ನು ವ್ಯವಸ್ಥಿತವಾಗಿ ನಿಭಾಯಿಸಲಾಗಿದೆ. ಇದಲ್ಲದೇ ಹೋರ ರಾಜ್ಯದಿಂದ ನಮ್ಮ ರಾಜ್ಯದಲ್ಲಿ ಅನುಷ್ಟಾನವಾಗಿರುವ ಯೋಜನೆಗಳು ಹಾಗೂ ತಂತ್ರಜ್ಞಾನ ಕುರಿತಾಗಿ  ಕರೆಗಳು ಬಂದಿವೆ.

ರಾಜ್ಯದಲ್ಲಿ ನೂತನವಾಗಿ ಪಶುಸಂಗೋಪನೆ ಇಲಾಖೆ ನಡೆಸಿದ ಈ ಪ್ರಯತ್ನ ರೈತರಿಗೆ, ಜಾನುವಾರು ಸಾಕಣೆದಾರರಿಗೆ, ಸ್ವಯಂ ಉದ್ಯೋಗ ಕಂಡುಕೊಳ್ಳುವವರಿಗೆ ಉಪಯೋಗವಾಗುತ್ತಿರುವುದು ಸಂತಸದ ಸಂಗತಿ. ದಿನದ 24 ಗಂಟೆ 3 ಶೀಪ್ಟ್ ನಲ್ಲಿ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಇದಲ್ಲದೇ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಟೆಲಿಗ್ರಾಂ, ಟ್ವೀಟರ್ ಮೂಲಕ 1000 ಕ್ಕೂ ಹೆಚ್ಚು ಕರೆಗಳು ಬಂದಿವೆ. ಪಶುಸಂಗೋಪನೆ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ನಡುವೆಯು ಪಶು ಕಲ್ಯಾಣ ಸಹಾಯವಾಣಿಯಿಂದ ಬಂದ ಎಲ್ಲ ಕರೆಗಳನ್ನು ಇಲಾಖೆಯ ಪಶುವೈದ್ಯರು ಹಾಗೂ ಸಿಬ್ಬಂದಿ ಅತ್ಯಂತ ಅಚ್ಚುಕಟ್ಟಾಗಿ ನಿಭಾಯಿಸುತ್ತಿರುವುದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬಿಡಾಡಿ ನಾಯಿಗಳಿಗಾಗಿ ಆಶ್ರಯ ಒದಗಿಸುವ ಕುರಿತು ಬಂದಿರುವ ಸುವಾರು 250 ಕರೆಗಳು ಮಾತ್ರ ಬಾಕಿ ಉಳಿದಿದ್ದು ಉಳಿದೆಲ್ಲ ಕರೆಗಳಿಗೆ ಸಂಪೂರ್ಣವಾಗಿ ಸ್ಪಂದನೆ ನೀಡಲಾಗಿದೆ.

ಪ್ರಾಣಿಗಳ ಆರೋಗ್ಯ ಮತ್ತು ಪಶುವೈದ್ಯಕೀಯ ಸೇವೆಗಳ ಬಗ್ಗೆ  2540 ಕರೆಗಳು, ಪಶು ಸಂಗೋಪನೆ ಸೇವೆಗಳ ಕುರಿತಾಗಿ 1989 ಕರೆಗಳು, ಪ್ರಾಣಿ ಕಲ್ಯಾಣ ಮತ್ತು ಕ್ರೌರ್ಯ ತಡೆಗಟ್ಟುವಿಕೆ ಕುರಿತಾಗಿ 934 ಕರೆಗಳು, ಪಶುಸಂಗೋಪನೆಯಲ್ಲಿ ತಂತ್ರಜ್ಞಾನದ ಹೊಸ ಬಳಕೆ ಕುರಿತಾಗಿ 53 ಕರೆಗಳು, ಸ್ವಯಂ ಉದ್ಯೋಗ, ತರಬೇತಿಗಾಗಿ 2691 ಕರೆಗಳು ಬಂದಿರುತ್ತವೆ.

Advertisement

ಜಿಲ್ಲಾವಾರು ಕರೆಗಳ ವಿವರ 

ಬೆಂಗಳೂರು ನಗರ 1644, ಬೆಂಗಳೂರು ಗ್ರಾಮಾಂತರ 192, ಬೀದರ 283, ಬಾಗಲಕೋಟೆ 173, ವಿಜಯಪುರ 228,  ಬೆಳಗಾವಿ 421, ಬಳ್ಳಾರಿ 300, ಚಾಮರಾಜನಗರ 88, ಚಿತ್ರದುರ್ಗ 221, ಚಿಕ್ಕಬಳ್ಳಾಪುರ 104, ಚಿಕ್ಕಮಗಳೂರು 124, ದಕ್ಷಣ ಕನ್ನಡ 117,  ದಾವಣಗೆರೆ 126, ಧಾರವಾಡ 172, ಗದಗ 95, ಹಾಸನ 193, ಹಾವೇರಿ 133, ಕಲ್ಬುರ್ಗಿ 319, ಕೋಲಾರ 89, ಕೊಪ್ಪಳ 187, ರಾಯಚೂರು 189, ಯಾದಗಿರಿ 157, ಉತ್ತರ ಕನ್ನಡ 93, ಉಡುಪಿ 32, ಕೊಡಗು 18, ರಾಮನಗರ 136, ಮಂಡ್ಯ 197, ತುಮಕೂರು 291, ಮೈಸೂರು 220, ಶಿವಮೊಗ್ಗ 142, ಹೊರ ರಾಜ್ಯದಿಂದ 274 .

ಜಾಗೃತಿ ಮೂಡಿಸಲು ಸೂಚನೆ 

ಪಶು ಕಲ್ಯಾಣ ಸಹಾಯವಾಣಿಯ ಬಗ್ಗೆ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಲು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು ಇದರ ಲಾಭವನ್ನು ರಾಜ್ಯದ ಎಲ್ಲ ರೈತರಿಗೆ ಹಾಗೂ ಜಾನುವಾರು ಕೃಷಿಯಲ್ಲಿ ತೊಡಗಿದವರಿಗೆ ತಲುವಂತೆ ಮಾಡಿ ಎಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next