Advertisement

Karnataka ರಾಜ್ಯದ ಇಬ್ಬರಿಗೆ ಅತ್ಯುತ್ತಮ ಶಿಕ್ಷಕ, ಶಿಕ್ಷಕಿ ರಾಷ್ಟ್ರ ಪ್ರಶಸ್ತಿ

11:12 PM Aug 26, 2023 | Team Udayavani |

ಶಿರಸಿ/ ಮಹಾಲಿಂಗಪುರ : ರಾಜ್ಯದ ಇಬ್ಬರು ಕೇಂದ್ರ ಸರ್ಕಾರದ 2023ನೇ ಸಾಲಿನ ಅತ್ಯುತ್ತಮ ಶಿಕ್ಷಕ, ಶಿಕ್ಷಕಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Advertisement

ಸಪನಾ ಶ್ರೀಶೈಲ ಅನಿಗೋಳ
ಮಹಾಲಿಂಗಪುರ ಪಟ್ಟಣದ ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸಪನಾ ಶ್ರೀಶೈಲ ಅನಿಗೋಳ ಅವರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಎಂ.ಎಸ್ಸಿ. ಬಿ.ಇಡಿ ಪದವಿಧರರಾದ ಅನಿಗೋಳ ಅವರು ಕಳೆದ 19 ವರ್ಷಗಳಿಂದ ಪಟ್ಟಣದ ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆಧುನಿಕತೆಗೆ ತಕ್ಕಂತೆ ಹೊಸ ಬೋಧನಾ ಕೌಶಲ್ಯಗಳನ್ನು ಅಳವಡಿಸಿಕೊಂಡು ಸ್ಮಾರ್ಟಕ್ಲಾಸ್, ಶೈಕ್ಷನೀಕ ಆ್ಯಪ್, ಕಂಪ್ಯೂಟರ್ ಬಳಕೆ ಮಾಡಿಕೊಂಡು ಅತ್ಯಂತ ಕಠಿಣ ವಿಷಯಗಳನ್ನು ಮಕ್ಕಳ ಮನಮುಟ್ಟುವಂತೆ ತಿಳಿಸುತ್ತಾ ಸಾವಿರಾರು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ವಿಜ್ಞಾನ ಶಿಕ್ಷಕಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ (2021) ರಾಜ್ಯ ಸರ್ಕಾರದಿಂದ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದುಕೊಂಡಿದ್ದರು.

ಇನ್ನಷ್ಟು ಸೇವೆ ಉತ್ತಮ ಸಲ್ಲಿಸಲು ಹುಮ್ಮಸ್ಸು ನೀಡಿದೆ
19 ವರ್ಷಗಳ ಕಾಲ ನಾನು ಸಲ್ಲಿಸಿದ ಶೈಕ್ಷನೀಕ ಸೇವೆಯನ್ನು ಗುರುತಿಸಿ, ನನಗೆ ಕೇಂದ್ರ ಸರ್ಕಾರದಿಂದ ಪ್ರಸಕ್ತ ಸಾಲಿನ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಬಂದಿದ್ದು ಬಹಳ ಸಂತಸವಾಗಿದೆ. ಈ ಪ್ರಶಸ್ತಿಯು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಭವಿಷ್ಯದಲ್ಲಿ ಮಕ್ಕಳಿಗೆ ಇನ್ನಷ್ಟು ಉತ್ತಮವಾಗಿ ಶಿಕ್ಷಣ ನೀಡಲು ಹಾಗೂ ಸಾಮಾಜಿಕ ಸೇವೆ ಸಲ್ಲಿಸಲು ಮತ್ತಷ್ಟು ಹುಮ್ಮಸ್ಸು ನೀಡಿದೆ ಎಂದು ಸಪನಾ ಶ್ರೀಶೈಲ ಅನಿಗೋಳ ಸಂತಸ ವ್ಯಕ್ತವಾದಿಸಿದ್ದಾರೆ.

ನಾರಾಯಣ ಭಾಗವತ್

Advertisement

ಶಿರಸಿಯ ಮಾರಿಕಾಂಬಾ ಪ್ರೌಢ ಶಾಲೆಯ ಕನ್ನಡ ಶಿಕ್ಷಕ, ರಂಗಕರ್ಮಿ ನಾರಾಯಣ ಭಾಗವತ್ ಅವರಿಗೆ ರಾಷ್ಟ್ರ ಮಟ್ಟದಲ್ಲಿ ನೀಡಲಾಗುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ.

ರಂಗಭೂಮಿಯಲ್ಲಿ ಆಸಕ್ತಿ ಹೊಂದಿದ ನಾರಾಯಣ ಭಾಗವತ್ ಅವರು ಅನೇಕ‌ ಶೈಕ್ಷಣಿಕ ಪ್ರಯೋಗಗಳ‌ ಜೊತೆ ಕನ್ನಡ ಭಾಷಾ ಪ್ರಯೋಗದಲ್ಲೂ ಕೆಲಸ ಮಾಡಿದ್ದಾರೆ. ಕಳೆದ ವರ್ಷ ಇವರಿಗೆ ಅತ್ಯುತ್ತಮ ಶಿಕ್ಷಕ‌ ಪ್ರಶಸ್ತಿ ಕೂಡ ಲಭಿಸಿತ್ತು. ರಾಷ್ಟ್ರ ಮಟ್ಟದಲ್ಲಿ ವಿಜ್ಞಾನ ನಾಟಕದಲ್ಲೂ ರಾಷ್ಟ್ರ ಮಟ್ಟದ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಲಭಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next