Advertisement

ಅತ್ಯುತ್ತಮ ವನ್ಯಧಾಮ: ಬಂಡೀಪುರಕ್ಕೆ ಎರಡು, ನಾಗರಹೊಳೆಗೆ 3ನೇ ಸ್ಥಾನ

11:38 PM Mar 06, 2024 | Team Udayavani |

ಗುಂಡ್ಲುಪೇಟೆ: ಮೂರು ರಾಜ್ಯಗಳ ಅರಣ್ಯದೊಂದಿಗೆ ಗಡಿ ಹಂಚಿಕೊಂಡಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನ‌ಕ್ಕೆ 2ನೇ ಬಾರಿಗೆ ಅತ್ಯುತ್ತಮ ವನ್ಯಧಾಮ ಪ್ರಶಸ್ತಿ ಲಭಿಸಿದೆ.

Advertisement

ಕೇಂದ್ರ ಸರಕಾರದ ರಾಷ್ಟ್ರೀಯ ಹುಲಿ ಸಂರಕ್ಷಣ ಪ್ರಾಧಿಕಾರ, ವೈಲ್ಡ್‌ ಲೈಫ್ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಮತ್ತು ಮಿನಿಸ್ಟ್ರಿ ಆಫ್ ಎನ್ವಾರ್ನ್ಮೆಂಟ್‌ ಆ್ಯಂಡ್‌ ಫಾರೆಸ್ಟ್‌ ಸಂಸ್ಥೆಯವರು ನಡೆಸಿರುವ ಸಮೀಕ್ಷೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ, ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕೈಗೊಂಡ ಕ್ರಮಗಳು, ಪ್ರವಾಸಿಗರು, ಶುಚಿತ್ವ, ಸಿಬಂದಿ ಮುಂತಾದ ಅಂಶಗಳ ಮಾನದಂಡಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ದೇಶದ 54 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗಿತ್ತು.

ಕೇರಳದ ಪೆರಿಯಾರ್‌ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೊದಲ ಸ್ಥಾನ, ಬಂಡಿಪುರ ಎರಡನೇ ಸ್ಥಾನ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೂರನೇ ಸ್ಥಾನ ಲಭಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next