ನಕ್ಸಲ್‌ಬಾರಿ, ಪಶ್ಚಿಮ ಬಂಗಾಲ : ‘ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ವಿಫಲವಾಗಿದೆ; ಆದರೆ ಪಶ್ಚಿಮ ಬಂಗಾಲದಲ್ಲಿ ತನ್ನ ಟಿಎಂಸಿ ಸರಕಾರ ಹೆಣ್ಣುಮಕ್ಕಳ ಅಭ್ಯುದಯಕ್ಕಾಗಿ ಜಾರಿಗೆ ತಂದ ಕನ್ಯಾಶ್ರೀ ಯೋಜನೆ ಯಶಸ್ವಿಯಾಗಿರುವುದಲ್ಲದೆ ವಿಶ್ವಸಂಸ್ಥೆಯ ಪ್ರಶಸ್ತಿಗೂ ಪಾತ್ರವಾಗಿದೆ’ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Advertisement
ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಅಭ್ಯುದಯಕ್ಕಾಗಿ 2012ರಲ್ಲೇ ರಾಜ್ಯ ಸರಕಾರ ಜಾರಿಗೆ ತಂದಿದ್ದ ಕನ್ಯಾಶ್ರೀ ಯೋಜನೆಗೆ ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ಪ್ರಶಸ್ತಿ ಸಂದಿದೆ ಎಂದು ಪಶ್ಚಿಮ ಬಂಗಾಲದ ಸಿಎಂ ಮಮತಾ ಬ್ಯಾನರ್ಜಿ ಹೇಳಿದರು.