Advertisement
ಶಾಲಾ ಕಟ್ಟಡ ಶಿಥಿಲವಾಗಿದ್ದು, ಇದರ 20 ಮೀಟರ್ ಉದ್ದ, 10 ಮೀಟರ್‌ಎತ್ತರದ ಕೆಂಪುಕಲ್ಲಿನ ಗೋಡೆ ರಸ್ತೆಯ ಬದಿಗೆ ವಾಲಿ ನಿಂತಿದೆ. ಅಡಿಪಾಯ ಕಟ್ಟಿ ಇಲ್ಲದಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಇಲ್ಲೇ ಚುನಾವಣಾ ಬೂತ್ ಇರುವುದರಿಂದ ಇತ್ತೀಚೆಗೆ ಛಾವಣಿ ದುರಸ್ತಿ ಮಾಡಲಾಗಿತ್ತು. ಈಗ ಎರಡು ಗೋಡೆ ಸಂಧಿಸುವ ಜಾಗ ಬಿರುಕು ಬಿಟ್ಟಿದ್ದು ಪ್ರತಿ ನಿತ್ಯ ಅಂತರ ಹೆಚ್ಚುತ್ತಿದೆ ಎಂದು ಜನರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕಟ್ಟಡದಲ್ಲಿರುವ ಮತ್ತು ಅಂಗನವಾಡಿಯ ಮಕ್ಕಳನ್ನು ಶಾಲೆಯ ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಗ್ರಾಮ ಆಡಳಿತ ಅಧಿಕಾರಿ ಮಂಜುನಾಥ್, ಸಹಾಯಕ ವಿಜಯ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
Related Articles
ಶಾಲೆಯ ಸ್ಥಿತಿ ಬಗ್ಗೆ ಪುತ್ತೂರು ಸಹಾಯಕ ಆಯುಕ್ತರಿಗೆ ಫೋನ್ ಮೂಲಕ ಮಾಹಿತಿಗಳನ್ನು ನೀಡಲಾಗಿದೆ. ಚಿತ್ರಗಳನ್ನು ಕಳಿಸಲಾಗಿದೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಾಶ್ವತ ಪರಿಹಾರಕ್ಕೆ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಪಂ ಅಧ್ಯಕ್ಷೆ ವಿದ್ಯಾಶ್ರೀ ತಿಳಿಸಿದ್ದಾರೆ.
Advertisement
-ಮಾಧವ ನಾಯಕ್ ಕೆ.