ನವ ದೆಹಲಿ: ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿ ಮಹಾನಗರ ಪಾಲಿಕೆ ಸದನದಲ್ಲಿ ಬಿಜೆಪಿ ಮತ್ತು ಎಎಪಿ ಸದಸ್ಯರ ನಡುವೆ ವಾಗ್ವಾದ ತಾರಕಕ್ಕೇರಿ ಕೈ ಕೈ ಮಿಲಾಯಿಸಿ ಕೋಲಾಹಲ ನಿರ್ಮಾಣವಾದ ಘಟನೆ ಬುಧವಾರ ರಾತ್ರಿ ನಡೆದಿದೆ.
ಮೇಯರ್ ಚುನಾವಣೆಯ ಕೆಲವೇ ಗಂಟೆಗಳಲ್ಲಿ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಕುರಿತು ಸದನದೊಳಗೆ ಭಾರಿ ಗದ್ದಲ ಉಂಟಾಗಿದೆ.
ದೆಹಲಿಯ ನೂತನ ಚುನಾಯಿತ ಮೇಯರ್ , ನಾಗರಿಕ ಸಂಸ್ಥೆಯ ಉನ್ನತ ಹುದ್ದೆಗೆ ಆಯ್ಕೆಯಾದ ಕೆಲವೇ ಗಂಟೆಗಳ ನಂತರ. ಶೆಲ್ಲಿ ಒಬೆರಾಯ್ ಅವರು ಬಿಜೆಪಿ ಕೌನ್ಸಿಲರ್‌ಗಳು ತಮ್ಮ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
“ಸುಪ್ರೀಂ ಕೋರ್ಟ್ ಆದೇಶದಂತೆ ನಾನು ಸ್ಥಾಯಿ ಸಮಿತಿ ಚುನಾವಣೆ ನಡೆಸುತ್ತಿದ್ದಾಗ ಬಿಜೆಪಿ ಕೌನ್ಸಿಲರ್‌ಗಳು ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ! ಇದು ಬಿಜೆಪಿಯ ಗುಂಡಾಗಿರಿಯಾಗಿದ್ದು ಮಹಿಳಾ ಮೇಯರ್ ಮೇಲೆ ಹಲ್ಲೆ ಮಾಡಲು ಯತ್ನಿಸುತ್ತಿದೆ ಎಂದು ಒಬೆರಾಯ್ ಟ್ವೀಟ್ ಮಾಡಿದ್ದಾರೆ.