Advertisement

ಝೀಕಾ ವೈರಸ್‌ ತಡೆಗೆ ಜಾಗ್ರತೆ ವಹಿಸಿ

10:03 AM Jul 17, 2021 | Team Udayavani |

ದಾವಣಗೆರೆ: ನೆರೆಯ ರಾಜ್ಯ ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಝೀಕಾ ವೈರಸ್‌ ನಿಂದ ಬರುವ ರೋಗದ ಬಗ್ಗೆ ಜಿಲ್ಲೆಯಲ್ಲಿಯೂಜಾಗ್ರತೆ ವಹಿಸಬೇಕು. ಇದಕ್ಕೆ ಕಾರಣವಾಗುವಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಝೀಕಾ ವೈರಸ್‌ ಹರಡುವುದನ್ನು ತಪ್ಪಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೆರೆಯ ಕೇರಳ ರಾಜ್ಯದಲ್ಲಿ ಝೀಕಾ ವೈರಸ್‌ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿದ್ದು, ಆರೋಗ್ಯ ಇಲಾಖೆಯ ಸೂಚನೆಯಂತೆ ಜಿಲ್ಲೆಯಲ್ಲಿ ಈ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದು ಈಡಿಸ್‌ ಈಜಿಪ್ಟೆ ç ಎನ್ನುವ ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆಯಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಇದಕ್ಕೆ ಯಾವುದೇ ಲಸಿಕೆ ಇಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುವುದೇ ಇದರ ನಿಯಂತ್ರಣಕ್ಕೆ ಇರುವ ದಾರಿ ಎಂದರು.

ಆರೋಗ್ಯ ಇಲಾಖೆಯು ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಈಡಿಸ್‌ ಜಾತಿಯ ಸೊಳ್ಳೆಗಳು ಅಭಿವೃದ್ಧಿಯಾಗದಂತೆ ಲಾರ್ವಾ ಸಮೀಕ್ಷೆ ಕೈಗೊಂಡು, ಸೊಳ್ಳೆಗಳ ಲಾರ್ವಾ ಪತ್ತೆಯಾದಲ್ಲಿಕೂಡಲೇ ನಾಶಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ ಅಂತಹ ಪ್ರದೇಶಗಳಲ್ಲಿ ತೀವ್ರ ನಿಗಾ ಇರಿಸಬೇಕು. ಘನ ತ್ಯಾಜ್ಯ ವಸ್ತುಗಳನ್ನು ಮಹಾನಗರಪಾಲಿಕೆಯೂಸೇರಿದಂತೆ ಆಯಾ ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಜಿಲ್ಲೆಯಲ್ಲಿ ಇಂತಹ ಪ್ರಕರಣ ಪತ್ತೆಹಚ್ಚಲು ಮುನ್ನೆಚ್ಚರಿಕೆಯಾಗಿ ರೋಗ ಸಮೀಕ್ಷೆ ಬಲಪಡಿಸುವುದರ ಜತೆಗೆ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳ ಸಹಭಾಗಿತ್ವದಲ್ಲಿಕಾರ್ಯ ನಿರ್ವಹಿಸಬೇಕು. ರೋಗ ಲಕ್ಷಣ ಪ್ರಕರಣ ಪತ್ತೆಯಾದಲ್ಲಿ, ಅದರ ಸೀರಂ ಮಾದರಿಯನ್ನು ಝೀಕಾ ವೈರಸ್‌ ಮತ್ತು ಡೆಂಘೀ ಪರೀಕ್ಷೆಗಾಗಿ ಜಿಲ್ಲಾ ಸರ್ವೇಕ್ಷಣಾ ಘಟಕ, ಡಿಪಿಎಚ್‌ಎಲ್‌ ಪ್ರಯೋಗ ಶಾಲೆಗೆ ಸೂಕ್ತ ವಿವರಣೆಗಳೊಂದಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್‌ ಝೀಕಾ ವೈರಸ್‌ ಕುರಿತು ಮಾಹಿತಿ ನೀಡಿ, ಈಡಿಸ್‌ ಈಜಿಪ್ಟ್ ಎನ್ನುವ ಸೊಳ್ಳೆಯಿಂದ ಹರಡುವ ಈ ರೋಗ ಸೋಂಕಿತರ ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮೂಲಕವೂ ಹರಡುತ್ತದೆ. ಜ್ವರ, ಕಣ್ಣು ಕೆಂಪಾಗುವುದು, ಸ್ನಾಯು ಮತ್ತು ಕೀಲು ನೋವು, ತಲೆನೋವು, ಆಯಾಸ ಮತ್ತು ಹೊಟ್ಟೆ ನೋವು ಇದರ ರೋಗ ಲಕ್ಷಣಗಳಾಗಲಿವೆ. ಗರ್ಭಿಣಿಯರು ಸೋಂಕಿಗೆ ಒಳಗಾದರೆ ಹುಟ್ಟಲಿರುವ ಮಗು ಕೂಡ ಸೋಂಕಿಗೆ ಒಳಗಾಗಿ ಮೈಕ್ರೋಸೆಫಾಲಿ ರೋಗಕ್ಕೆ ತುತ್ತಾಗುವ ಸಾಧ್ಯತೆ ಇದೆ. ಹೀಗಾಗಿ ಸೊಳ್ಳೆ ಕಚ್ಚುವಿಕೆಯಿಂದ ಪಾರಾಗುವುದೇ ಇದರ ತಡೆಗೆ ಸೂಕ್ತ ವಿಧಾನವಾಗಿದೆ ಎಂದರು.

Advertisement

ಈಡಿಸ್‌ ಜಾತಿ ಸೊಳ್ಳೆಗಳು ಅಭಿವೃದ್ಧಿಯಾಗದಂತೆಮನೆಯ ಒಳಗೆ ಮತ್ತು ಸುತ್ತಮುತ್ತಲಿನ ನೀರಿನ ಸಂಗ್ರಹಗಳಲ್ಲಿ ಮನೆ, ಗ್ರಾಮ, ನಗರ ಪ್ರದೇಶದ ನೀರಿನ ತೊಟ್ಟಿ, ಘನತ್ಯಾಜ್ಯ ವಸ್ತುಗಳಲ್ಲಿನ ನೀರಿನಲ್ಲಿಮೊಟ್ಟೆ ಇಟ್ಟು ಮರಿ (ಲಾರ್ವಾ) ಮಾಡಿಕೊಳ್ಳುತ್ತವೆ. ಅಂತಹ ನೀರಿನ ಸಂಗ್ರಹಗಾರಗಳನ್ನು ಕಡ್ಡಾಯವಾಗಿ ವಾರಕ್ಕೊಮ್ಮೆ ಸ್ವಚ್ಛವಾಗಿ ತಿಕ್ಕಿ ತೊಳೆದು ಬಳಸಬೇಕು. ಆರೋಗ್ಯ ಇಲಾಖೆಯು ಜಿಲ್ಲೆಯಲ್ಲಿ ಈಗಾಗಲೆ ಈಡೀಸ್‌ ಜಾತಿ ಸೊಳ್ಳೆಗಳು ಅಭಿವೃದ್ಧಿಯಾಗದಂತೆ ಲಾರ್ವಾ ಸಮೀಕ್ಷೆ ನಿರಂತರವಾಗಿ ನಡೆಸುತ್ತಿದೆ. ಲಾರ್ವಾಗಳು ಮರು ಉತ್ಪತ್ತಿಯಾಗಿರುವುದು ಕಂಡುಬಂದಲ್ಲಿ, ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಅಗತ್ಯ ಕ್ರಮ ವಹಿಸಲಿದೆ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುವ ಅಲ್ಟ್ರಾ ಸೌಂಡ್‌ ಸ್ಕ್ಯಾನಿಂಗ್‌ ಸೆಂಟರ್‌ ಗಳಲ್ಲಿ ಗರ್ಭಿಣಿ ಮಹಿಳೆಯರ ಎನ್‌ಎನ್‌ಸಿ ತಪಾಸಣೆ ನಡೆಸಿದಾಗ ಮೈಕ್ರೋಸೆಫಾಲಿ ಕಂಡುಬಂದಲ್ಲಿ ಅಥವಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮೈಕ್ರೋಸೆಫಾಲಿ ಮಗುವಿನ ಜನನವಾದಲ್ಲಿ ತಕ್ಷಣ ಅಗತ್ಯ ಪರೀಕ್ಷೆಗಳಿಗಾಗಿ ಜಿಲ್ಲಾ ಸವೇಕ್ಷಣಾ ಘಟಕ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ರಾಜೀವ್‌, ಕೋವಿಡ್‌ ನೋಡಲ್‌ ಅಧಿಕಾರಿ ಪ್ರವೀಣ್‌ ನಾಯಕ್‌, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ. ಮೀನಾಕ್ಷಿ, ಸರ್ವೆಲೆನ್ಸ್‌ ಮೆಡಿಕಲ್‌ ಅಧಿಕಾರಿ ಡಾ.ಶ್ರೀಧರ್‌, ಡಾ. ನಟರಾಜ್‌, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ಜಿಲ್ಲೆಯ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಡೆಂಘೀ ವಿರೋಧಿ ಮಾಸಾಚರಣೆ ಅಂಗವಾಗಿ ಸಾರ್ವಜನಿಕ ಜಾಗೃತಿಗಾಗಿ ವಿವಿಧ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next