ಬ್ರಿಸ್ಬೇನ್: ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯಕ್ಕೆ ಆತಿಥೇಯ ಆಸ್ಟ್ರೇಲಿಯಾ ತಂಡ ಪ್ರಕಟಿಸಿದೆ. ಅಡಿಲೇಡ್ ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಸುಲಭ ಜಯ ಸಾಧಿಸಿ ಸರಣಿ ಸಮಬಲಕ್ಕೆ ತಂದಿರುವ ಆಸ್ಟ್ರೇಲಿಯಾ ಬ್ರಿಸ್ಬೇನ್ ನಲ್ಲಿ ಪಂದ್ಯ ಗೆಲ್ಲುವ ಯೋಜನೆಯಲ್ಲಿದೆ.
ಆಸ್ಟ್ರೇಲಿಯಾದ ಜೋಶ್ ಹೇಜಲ್ವುಡ್ ಅವರು ಗಾಯದಿಂದ ಗುಣಮುಖಗೊಂಡಿದ್ದು, ಬ್ರಿಸ್ಬೇನ್‌ನಲ್ಲಿ ಭಾರತ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಆಡಲಿದ್ದಾರೆ. ಸಹ ವೇಗಿಗಳಾದ ಪ್ಯಾಟ್ ಕಮಿನ್ಸ್ ಮತ್ತು ಮಿಚೆಲ್ ಸ್ಟಾರ್ಕ್ ಅವರೊಂದಿಗೆ ಹೇಜಲ್ವುಡ್ ಆಡಲಿದ್ದಾರೆ.
ಹೇಜಲ್ವುಡ್ ಅವರು ಪರ್ತ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆದಿದ್ದರು. ಆದರೆ ಗಾಯದ ಕಾರಣದಿಂದ ಅಡಿಲೇಡ್ ನಲ್ಲಿ ಆಡರಿಲಿಲ್ಲ. ಅವರ ಬದಲಿಗೆ ಸ್ಕಾಟ್ ಬೋಲ್ಯಾಂಡ್ ಉತ್ತಮ ಪ್ರದರ್ಶನ ನೀಡಿದ್ದರು.
ಆಸ್ಟ್ರೇಲಿಯಾದ ಭದ್ರ ಕೋಟೆಯಾಗಿದ್ದ ಗಾಬಾದಲ್ಲಿ ಕಾಂಗರೂ ತಂಡವು 1988 ರಿಂದ ಅಜೇಯವಾಗಿತ್ತು. ಭಾರತವು 2021 ರಲ್ಲಿ ಗಾಬಾದಲ್ಲಿ ಗೆದ್ದು ನಾಲ್ಕು ಟೆಸ್ಟ್‌ಗಳ ಸರಣಿಯನ್ನು 2-1 ರಿಂದ ವಶಪಡಿಸಿಕೊಂಡಿತ್ತು.
ಆಸ್ಟ್ರೇಲಿಯಾದ ಪ್ಲೇಯಿಂಗ್ XI: ನಾಥನ್ ಮೆಕ್‌ಸ್ವೀನಿ, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹೇಜಲ್‌ವುಡ್