ಬಿಸ್ಬೇನ್: ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ಮೂರನೇ ಟೆಸ್ಟ್ ಪಂದ್ಯ ಶನಿವಾರ (ಡಿ.14) ಆರಂಭವಾಗಿದೆ. ಬ್ರಿಸ್ಬೇನ್ ನ ಗಾಬಾದಲ್ಲಿ ಕೇವಲ 13.2 ಓವರ್ ಗಳ ಆಟ ನಡೆದಿದ್ದು, ಬಳಿಕ ಮಳೆ ಆರಂಭವಾಗಿದೆ.
ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದೆ. ಬ್ಯಾಟಿಂಗ್ ಅವಕಾಶ ಪಡೆದ ಆಸ್ಟ್ರೇಲಿಯಾ ತಂಡವು ವಿಕೆಟ್ ನಷ್ಟವಿಲ್ಲದೆ 28 ರನ್ ಮಾಡಿದೆ. 19 ರನ್ ಗಳಿಸಿರುವ ಉಸ್ಮಾನ್ ಖ್ವಾಜಾ ಮತ್ತು ನಾಥನ್ ಮೆಕ್ಸ್ವೀನಿ ನಾಲ್ಕು ರನ್ ಗಳಿಸಿ ಆಡುತ್ತಿದ್ದಾರೆ.
ಬ್ರಿಸ್ಬೇನ್ ಪಂದ್ಯಕ್ಕೆ ಭಾರತ ರವೀಂದ್ರ ಜಡೇಜಾ ಮತ್ತು ಆಕಾಶ್ ದೀಪ್ ಅವರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳಲಾಗಿದೆ. ಹೀಗಾಗಿ ಕಳೆದ ಪಂದ್ಯವಾಡಿದ್ದ ಹರ್ಷಿತ್ ರಾಣಾ ಮತ್ತು ಆರ್ ಅಶ್ವಿನ್ ಅವರನ್ನು ಬ್ರಿಸ್ಬೇನ್ ಟೆಸ್ಟ್ಗೆ ಕೈಬಿಡಲಾಗಿದೆ.
ಕಳೆದ ತಿಂಗಳು ನ್ಯೂಜಿಲ್ಯಾಂಡ್ ವಿರುದ್ಧ ಮುಂಬೈ ಟೆಸ್ಟ್ ನಲ್ಲಿ ಆಡಿದ ನಂತರ ಜಡೇಜಾ ಮತ್ತು ಆಕಾಶ್ ದೀಪ್ ಮೊದಲ ಬಾರಿಗೆ ಆಡುವ ಬಳಗ ಸೇರಿದ್ದಾರೆ.
ಆರಂಭಿಕರಾಗಿ ರಾಹುಲ್ ಕ್ಲಿಕ್ ಆದ ಕಾರಣದಿಂದ ಕಳೆದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ನಾಯಕ ರೋಹಿತ್ ಶರ್ಮಾ ಗಾಬಾ ಪಂದ್ಯದಲ್ಲೂ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.
ಬ್ರಿಸ್ಬೇನ್ ನಲ್ಲಿ ಬೆಳಿಗ್ಗೆ ಮೋಡ ಕವಿದ ವಾತಾವರಣವಿದ್ದು, ನಂತರ ಮಳೆಯಾಗುವ ಸಾಧ್ಯತೆಯಿದ್ದ ಕಾರಣ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಲೆಕ್ಕಾಚಾರ ಹಾಕಿದಂತೆ ಬ್ರಿಸ್ಬೇನ್ ನಲ್ಲಿ ಭಾರಿ ಮಳೆಯಾಗುತ್ತಿದೆ.
ಬ್ರಿಸ್ಬೇನ್ ಟೆಸ್ಟ್ ಪಂದ್ಯಕ್ಕೆ ತಂಡಗಳು
ಆಸ್ಟ್ರೇಲಿಯಾ: ಉಸ್ಮಾನ್ ಖ್ವಜಾ, ನಾಥನ್ ಮೆಕ್ಸ್ವೀನಿ, ಮಾರ್ನಸ್ ಲಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿ.ಕೀ), ಪ್ಯಾಟ್ ಕಮಿನ್ಸ್ (ನಾ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್.
ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿ.ಕೀ), ರೋಹಿತ್ ಶರ್ಮಾ(ನಾ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್