ನವದೆಹಲಿ:ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಾನಿಪುರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರೀ ಮತಗಳ ಅಂತರರ ಸೋಲನ್ನು ಅನುಭವಿಸಲಿದ್ದಾರೆ ಎಂದು ಹಿಂದುಸ್ತಾನಿ ಅವಾಮ್ ಮೋರ್ಚಾ (ಸೆಕ್ಯುಲರ್) ನಾಯಕ ಸತಾದ್ರು ರಾಯ್ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ:ಹಿಂದೂ ದೇವಸ್ಥಾನಗಳು ಮಾತ್ರ ಟಾರ್ಗೇಟ್ ಮಾಡುತ್ತಿರುವುದು ಯಾಕೆ..!? : ಪ್ರತಾಪ್ ಸಿಂಹ
ಪ್ರತಿಯೊಬ್ಬರಿಗೂ ತಿಳಿದಿದೆ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗಾಗಲೇ ನಂದಿಗ್ರಾಮದಲ್ಲಿ ಪರಾಜಯಗೊಂಡಿದ್ದರು. ನನ್ನ ಹೇಳಿಕೆಯನ್ನು ಗಮನದಲ್ಲಿಟ್ಟುಕೊಳ್ಳಿ, ಒಂದು ವೇಳೆ ಒಂದು ಮತದ ಅಂತರದಲ್ಲಿ ಸೋಲನ್ನು ಅನುಭವಿಸಿದರೂ ಕೂಡಾ ಮಮತಾ ಅವರು ಭವಾನಿಪುರ್ ಕ್ಷೇತ್ರದಲ್ಲಿ ದಾಖಲೆಯ ಸೋಲನ್ನು ಎದುರಿಸಲಿದ್ದಾರೆ ಎಂದು ರಾಯ್ ಹೇಳಿದರು.
ಮಮತಾ ಬ್ಯಾನರ್ಜಿ ಶುಕ್ರವಾರ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಈಗಾಗಲೇ ಟಿಎಂಸಿ ವರಿಷ್ಠೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಎದುರಾಳಿಯಾಗಿ ಭಾರತೀಯ ಜನತಾ ಪಕ್ಷ ಪ್ರಿಯಾಂಕಾ ತಿಬ್ರಿವಾಲ್ ಅವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ.
ಭವಾನಿಪುರ್ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಮಮತಾ ಬ್ಯಾನರ್ಜಿ ಕಳೆದ ಐದು ವರ್ಷಗಳಲ್ಲಿ ಏನು ಮಾಡಿದ್ದಾರೆ ಎಂಬುದಾಗಿ ರಾಯ್ ಪ್ರಶ್ನಿಸಿದ್ದಾರೆ. ಎಷ್ಟು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ? ಒಂದೇ ಒಂದು ಬಾರಿಯೂ ಭವಾನಿಪುರ್ ಕ್ಷೇತ್ರಕ್ಕೆ ಮಮತಾ ಬ್ಯಾನರ್ಜಿ ಭೇಟಿ ನೀಡಿಲ್ಲ ಎಂದು ಆರೋಪಿಸಿದ್ದಾರೆ.