ಕೋಲ್ಕತಾ: ಪಶ್ಚಿಮಬಂಗಾಳದ ಭವಾನಿಪುರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಗುರುವಾರ(ಸೆಪ್ಟೆಂಬರ್ 30) ಬೆಳಗ್ಗೆ ಆರಂಭಗೊಂಡಿದ್ದರೂ ಕೂಡಾ ಮಂದಗತಿಯಲ್ಲಿ ಸಾಗಿದ್ದು, ಶೇ.21ರಷ್ಟು ಮತದಾನವಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:ಪಂಜಾಬ್ ನಲ್ಲಿ ಅಧಿಕಾರಕ್ಕೇರುವುದೇ ಆಮ್ ಆದ್ಮಿ:ಪಕ್ಷದ ಬಲವೇನು?
ತೃಣಮೂಲ ಕಾಂಗ್ರೆಸ್ ನ ಮದನ್ ಮಿತ್ರಾ ಅವರು ಉದ್ದೇಶಪೂರ್ವಕವಾಗಿ ಮತಗಟ್ಟೆಯನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೇವಾಲ್ ಆರೋಪಿಸಿದ್ದಾರೆ.
ಭವಾನಿಪುರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಪ್ರಿಯಾಂಕಾ ತಿಬ್ರೇವಾಲ್ ಅಖಾಡದಲ್ಲಿದ್ದು, ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ.
ಭವಾನಿಪುರ್ ಹಾಗೂ ಇತರ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಶಾಂತಿಯುತ ಮತದಾನಕ್ಕಾಗಿ ಎರಡು ಸಾವಿರ ಮಂದಿ ಭದ್ರತಾ ಸಿಬಂದಿಯನ್ನು ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪ್ರತಿಷ್ಠೆಯ ಕಣವಾಗಿದ್ದರೆ, ಭಾರತೀಯ ಜನತಾ ಪಕ್ಷಕ್ಕೆ ಮಮತಾ ಬ್ಯಾನರ್ಜಿಯನ್ನು ಸೋಲಿಸಲು ಶತಾಯಗತಾಯ ಪ್ರಯತ್ನಿಸಿದ್ದು, ಮತದಾರರ ಯಾರನ್ನು ಗೆಲ್ಲಿಸಲಿದ್ದಾನೆ ಎಂಬುದನ್ನು ಕಾದು ನೋಡಬೇಕಾಗಿದೆ.