Advertisement

ಹಿಟ್ ಆಂಡ್ ರನ್: ಅಪರಿಚಿತ ವಾಹನ ಢಿಕ್ಕಿಯಾಗಿ ಬೈಕ್ ಸವಾರ ಸಾವು

10:00 AM Feb 04, 2020 | Team Udayavani |

ಶಿವಮೊಗ್ಗ: ಜಿಲ್ಲೆಯ ಉಜ್ಜನಿಪುರ ಗ್ರಾಮದಲ್ಲಿ ಬೈಕ್ ಸವಾರರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರವಿವಾರ ರಾತ್ರಿ ನಡೆದಿದೆ.

Advertisement

ಮಂಜುನಾಥ್ ಗೌಡ (35) ಅಪಘಾತದಲ್ಲಿ ಮೃತಪಟ್ಟವರು. ಇವರು ಕೇಬಲ್ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 206ರ ಭದ್ರಾವತಿ ಬೈಪಾಸ್ ನ ಉಜ್ಜನಿಪುರ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ.

ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next