Advertisement

ಆರ್ಥಿಕಾಭಿವೃದ್ಧಿಗೆ ಸಹಕಾರ ಸಂಘ ಸಹಕಾರಿ

05:09 PM Nov 15, 2019 | Naveen |

ಭದ್ರಾವತಿ: ರೈತರಿಗೆ ನೀಡುವ ಆರ್ಥಿಕ ನೆರವಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಹೋಲಿಸಿದರೆ ಸಹಕಾರ ಸಂಘಗಳ ಬ್ಯಾಂಕ್‌ಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್‌ ಹೇಳಿದರು.

Advertisement

ಗುರುವಾರ ನ್ಯೂಟೌನ್‌ ಲಯನ್ಸ್‌ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ, ಜಿಲ್ಲಾ ಸಹಕಾರ ಯೂನಿಯನ್‌ ಸಹಕಾರ ಕೇಂದ್ರ ಬ್ಯಾಂಕ್‌, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹಾಲು ಉತ್ಪಾದಕರ ಒಕ್ಕೂಟ, ಸಹಕಾರ ಇಲಾಖೆ, ತಾಲೂಕಿನ ಎಲ್ಲಾ ಸಹಕಾರ ಬ್ಯಾಂಕ್‌ ಗಳ ಆಶ್ರಯದಲ್ಲಿ ನಡೆದ ಗ್ರಾಮೀಣ ಸಹಕಾರ ಸಂಸ್ಥೆಗಳ ಅನ್ವೇಷಣೆ 66 ನೇ ಅಖೀಲ ಭಾರತ ಸಹಕಾರ ಸಪ್ತಾಹ ಜಿಲ್ಲಾ ಮಟ್ಟದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಬ್ಯಾಂಕ್‌ಗಳು ಹೆಸರಿಗೆ ತಕ್ಕಂತೆ ಬಡವರಿಗೆ ಆರ್ಥಿಕ ಸಹಕಾರವನ್ನು ಸಾಲದ ರೂಪದಲ್ಲಿ ನೀಡುವ ಮೂಲಕ ಬಡ ಮತ್ತು ಮದ್ಯಮ ವರ್ಗದ ಜನರ ಕಾಮಧೇನು, ಕಲ್ಪವೃಕ್ಷ ಎಂಬ ರೀತಿಯಲ್ಲಿ ನೆರವು ನೀಡುತ್ತಿವೆ. ಸಾಲ ಪಡೆದವರು ಕಾಲಕ್ಕೆ ಸರಿಯಾಗಿ ಸಾಲವನ್ನು ಮರು ಪಾವತಿಸಿದರೆ ಸಹಕಾರಿ ಸಂಘಗಳ ಆರ್ಥಿಕ ಸ್ಥಿತಿ ಉತ್ತಮ ಗೊಳ್ಳುವುದರ ಜೊತೆಗೆ ಇನ್ನೂ ಹೆಚ್ಚಿನ ಜನರು ಹೆಚ್ಚಿನ ಪ್ರಮಾಣದಲ್ಲಿ ಹಣಕಾಸಿನ ನೆರವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ಸಹಕಾರ ಕ್ಷೇತ್ರದ ವ್ಯಾಪ್ತಿಗೆ ಬರುವ ಬಹುತೇಕ ಸಂಘ-ಸಂಸ್ಥೆಗಳ ಸಮಸ್ಯೆಗಳ ಪರಿಹಾರಕ್ಕೆ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡ ನೇತೃತ್ವದಲ್ಲಿ ನಿಯೋಗ ತೆರಳಿ ಸಂಬಂಧಿತ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇವೆ ಎಂದರು. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡ ಮಾತನಾಡಿ, ಸಹಕಾರಿ ಸಂಘ-ಸಂಸ್ಥೆಗಳು ಬಡ ರೈತರು ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗುವಂತೆ ಅಗತ್ಯವಾದ ಸಾಲ, ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸುವ ಮೂಲಕ ರಾಷ್ಟ್ರದ ಅರ್ಥಿಕ- ಸಾಮಾಜಿಕ ಅಭಿವೃದ್ಧಿಯ ಹರಿಕಾರ ಎನಿಸಿಕೊಂಡಿದೆ ಎಂದರು.

ಜಿಪಂ ಅಧ್ಯಕ್ಷೆ ಜ್ಯೋತಿ ಎಸ್‌. ಕುಮಾರ್‌ ಮಾತನಾಡಿ, ಸಹಕಾರ ಸಂಘಗಳಿಂದ ಸಾಲ ಪಡೆದ ಫಲಾನುಭವಿಗಳು ಸಕಾಲದಲ್ಲಿ ಮರುಪಾವತಿ ಮಾಡಿ ಸಹಕಾರ ಸಂಘಗಳ ಬೆಳವಣಿಗೆಗೆ ಸಹಕರಿಸುವಂತೆ ಹೇಳಿದರು. ಜಿಲ್ಲಾ ಸಹಕಾರ ಯೂನಿಯನ್‌ ನಿರ್ದೇಶಕ ಅರಕೆರೆ ಎಚ್‌.ಎಲ್‌. ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರ ಹಿಂದಿನ ಮಾದರಿಯಲ್ಲಿ ಯಶಸ್ವಿನಿ ಕಾರ್ಡನ್ನು ಜಾರಿ ಮಾಡಬೇಕೆಂದರು.

Advertisement

ಜಿಪಂ ಸದಸ್ಯ ಜೆ.ಪಿ. ಯೋಗೀಶ್‌, ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಡಿ. ಆನಂದ್‌ ಮತ್ತಿತರರು ಮಾತನಾಡಿದರು. ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಎಚ್‌.ಯು. ಸುರೇಶ್‌ ವಾಟಗೋಡು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಹಕಾರ ಅಡಕೆ ಮಾರಾಟ ಮಹಾಮಂಡಳಿ ನಿರ್ದೇಶಕ ಎಚ್‌.ಎನ್‌. ನಾಗರಾಜ್‌, ಸಹಕಾರ ಸಂಘಗಳ ಉಪ ನಿಬಂಧಕ ತಿಪ್ಪೇಸ್ವಾಮಿ, ಟಿಎಪಿಸಿಎಂಸಿ ಅಧ್ಯಕ್ಷ ಆರ್‌. ಶ್ರೀನಿವಾಸ್‌ ಮತ್ತಿತರರು ಇದ್ದರು.

ರಚನಾ ಪ್ರಾರ್ಥಿಸಿದರು. ಗೊಂದಿ ಜಯರಾಂ ಸ್ವಾಗತಿಸಿದರು. ಉಮಾ ಪಾಟೀಲ್‌ ವಂದಿಸಿದರು. ಎಂ. ವಿರೂಪಾಕ್ಷಪ್ಪ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಅಗಲಿದವರಿಗಾಗಿ ಮೌನಾಚರಣೆ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next