Advertisement

ವ್ಯಕ್ತಿಗೆ ಕೋವಿಡ್: ರಸ್ತೆ ಸೀಲ್‌ಡೌನ್‌

01:26 PM Jul 02, 2020 | Naveen |

ಭದ್ರಾವತಿ: ಇಲ್ಲಿನ ಹೊಸಮನೆ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್‌ ಪತ್ತೆಯಾದ ಹಿನ್ನೆಲೆಯಲ್ಲಿ ಇಲ್ಲಿನ ಮೂರು ರಸ್ತೆಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

Advertisement

ಬಸ್‌ ಕಂಡಕ್ಟರ್‌ ಕಂ ಡ್ರೈವರ್‌ ಆಗಿರುವ 36 ವರ್ಷದ ವ್ಯಕ್ತಿ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಾಲಯದ ಬಳಿಯ ನಿವಾಸಿಯಾಗಿದ್ದಾರೆ. ಈ ವ್ಯಕ್ತಿ ಮಂಗಳೂರಿನಿಂದ ಹಿಂದಿರುಗಿದ್ದಾರೆ ಎಂದು ಹೇಳಲಾಗಿದ್ದು, ಇವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಮಂಗಳವಾರ ರಾತ್ರಿ ವರದಿಯಲ್ಲಿ ಪಾಸಿಟಿವ್‌ ಬಂದಿದ್ದು, ಇವರನ್ನು ಮೆಗ್ಗಾನ್‌ ಆಸ್ಪತ್ರೆಯ ಐಸೋಲೇಶನ್‌ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ.

ಇನ್ನು, ಹಿಂದೂ ಮಹಾಸಭಾ ಗಣಪತಿ ದೇವಾಲಯದ ಎದುರಿನ ಮೂರು ಅಡ್ಡರಸ್ತೆಗಳನ್ನು, ದೇವಾಲಯ ವ್ಯಾಪ್ತಿಯ ಮುಖ್ಯ ರಸ್ತೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. 14 ದಿನಗಳ ಕಾಲ ಈ ಪ್ರದೇಶದಲ್ಲಿ ಜನರ ಓಡಾಟವನ್ನು ನಿರ್ಬಂಧಿಸಲಾಗಿದ್ದು, ರಸ್ತೆಯನ್ನು ಸ್ಯಾನಿಟೈಸ್‌ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next