ಹುಣಸೂರು: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಗುಜರಾತ್‌ನ ಮಾರ್ವಾಡಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 300 ಕೋಟಿ ರೂ. ಆದಾಯದಲ್ಲಿರುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಇಲ್ಲದ ಸಬೂಬು ಹೇಳಿ ಮುಚ್ಚಲು ಹೊರಟಿರುವುದು ತರವಲ್ಲ.
ಆದಾಯ ತಂದುಕೊಡುವ ಇಂತಹ ದೊಡ್ಡ ಕಂಪನಿಗಳನ್ನು ಗುಜರಾತ್‌ನ ಮಾರ್ವಾಡಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು. ಈ ಬಗ್ಗೆ ಅಕ್ಷರಸ್ಥ ರಾಜಕಾರಣಿಗಳು ಪ್ರಶ್ನಿಸದೆ ಅನಕ್ಷರಸ್ಥರಂತೆ ವರ್ತಿಸುತ್ತಿರುವುದು ಜನತಂತ್ರ ವ್ಯವಸ್ಥೆಗೆ ಮಾರಕವಾಗಲಿದೆ ಎಂದು ಎಚ್ಚರಿಸಿದರು.