Advertisement

ಹೆಚ್ಚುವರಿ ಹಣ ವಸೂಲಿ-ದೂರು

03:09 PM May 09, 2020 | Naveen |

ಭದ್ರಾವತಿ: ನಗರದ ಅಡುಗೆ ಅನಿಲ ಡಿಸ್ಟ್ರಿಬ್ಯೂಟರ್ ಅವರು ಗ್ರಾಹಕರಿಗೆ ಅಡುಗೆ ಅನಿಲ ಸಿಲಿಂಡರ್‌ ಪೂರೈಸಲು ಹೆಚ್ಚುವರಿ ಹಣ ಪಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ಥಳೀಯರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌ ಈಶ್ವರಪ್ಪನವರಿಗೆ ಶುಕ್ರವಾರ ಗ್ರೇಡ್‌-2 ತಹಶೀಲ್ದಾರ್‌ ರಂಗಮ್ಮ ಮೂಲಕ ದೂರು ಸಲ್ಲಿಸಿ ಒತ್ತಾಯಿಸಿದ್ದಾರೆ.

Advertisement

ಅನಿಲ ಸಿಲಿಂಡರ್‌ ನಿಗದಿತ ದರಕ್ಕೆ ಪೂರೈಸದೆ 743 ರೂ. ಇದ್ದರೆ, 770 ರೂ. ಪಡೆಯಲಾಗುತ್ತಿದೆ. ಹೆಚ್ಚುವರಿಯಾಗಿ ಸುಮಾರು 27 ಹೆಚ್ಚು ಪಡೆಯಲಾಗುತ್ತಿದೆ. ಆದರೆ 743 ರೂ.ಗಳಿಗೆ ರಶೀದಿ ನೀಡಲಾಗುತ್ತಿದೆ. ಪ್ರಸ್ತುತ ಕೋವಿಡ್ ವೈರಸ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಘೋಷಿಸಿದ ಪರಿಣಾಮ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲೂ ಹೆಚ್ಚುವರಿ ಹಣ ವಸೂಲಾತಿ ಮಾಡುತ್ತಿರುವುದು ಸರಿಯಲ್ಲ. ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತಾಲೂಕು ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್‌ ಎಸ್‌.ಗೌಡ, ಮೋಹನ್‌ ಕುಮಾರ್‌, ಎಚ್‌. ಮಂಜುನಾಥ, ಎಸ್‌. ಶಿವು, ಪ್ರಕಾಶ್‌, ಸುಬ್ಬೇಗೌಡ, ಅಲಿಂ ಸೇರಿದಂತೆ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next