Advertisement

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ

05:48 PM Jun 20, 2020 | Naveen |

ಭದ್ರಾವತಿ: ಜೂ. 25ರಿಂದ ಜು. 3ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್‌ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ತಾಲೂಕಿನಲ್ಲಿ ಈಬಾರಿ ಒಟ್ಟು 4458 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವವರಿದ್ದು ಗ್ರಾಮಾಂತರ ವಿಭಾಗದಲ್ಲಿ 7 ಮತ್ತು ನಗರ ವ್ಯಾಪ್ತಿಯಲ್ಲಿ 8ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತೀ ಪರೀಕ್ಷಾ ಕೇಂಧ್ರದಲ್ಲಿ ಎರಡು ಕೊಠಡಿಗಳನ್ನು ಹೆಚ್ಚುವರಿಯಾಗಿ ಇರಿಸಿಕೊಂಡು ಅಲ್ಲಿ ಜ್ವರ, ಶೀತ, ಕೆಮ್ಮು ಇದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಸಲುವಾಗಿ 2 ಪ್ರತ್ಯೇಕ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದರು.

ವಾಹನ ಸೌಲಭ್ಯವಿಲ್ಲದ ಸ್ಥಳದಿಂದ ಪರೀಕ್ಷೆಗೆ  ರಬೇಕಾದ 259 ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗಾಗಿ15 ಖಾಸಗಿ ಶಾಲೆಯ ಬಸ್‌ಗಳನ್ನು ವ್ಯವಸ್ಥೆ  ಮಾಡಲಾಗಿದೆ. ಬೇರೆ ಜಿಲ್ಲೆಯಿಂದ ನಮ್ಮ ತಾಲೂಕಿಗೆ ವಲಸೆ ಬಂದಿರುವ 77 ವಿದ್ಯಾರ್ಥಿಗಳು ನಮ್ಮ ತಾಲೂಕಿನಲ್ಲಿ ಪರೀಕ್ಷೆ ಬರೆಯಲು ಬಯಸಿದ್ದು ಅವರಿಗೆ ಪರೀಕ್ಷ ಕೇಂದ್ರಗಳಲ್ಲಿ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಮನ್ವಯಾಧಿಕಾರಿ ರಾಜಶೇಖರ್‌, ವ್ಯವಸ್ಥಾಪಕ ಕಾಂತರಾಜ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next