Advertisement
ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ, ಭಗಂಡೇಶ್ವರ ದೇವಾಲಯಗಳಿಗೆ ಪೂಜೆ, ಬಳಿಕ ಬಾಳೆದಿಂಡಿ ನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣಗಳನ್ನು ಹಾಕಿ ವಿಶೇಷ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಮಾಡ ಲಾಯಿತು. ಬಳಿಕ ತ್ರಿವೇಣಿ ಸಂಗಮದಲ್ಲಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡು ವಿಸರ್ಜಿಸಲಾಯಿತು. ಪೊಲಿಂಕಾನ ಉತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದಲ್ಲಿ ಪೊಲಿಂಕಾನ ಉತ್ಸವ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಗಂಡೇಶ್ವರ ದೇವಾಲಯದ ಎಲ್ಲ ದೇವರಿಗೆ ಪೂಜೆ ಪುರಸ್ಕಾರ ಕೈಗೊಂಡು ಕರಿಮಣಿ, ಚಿನ್ನದ ಸರ, ತೊಟ್ಟಿಲು, ಬೆಳ್ಳಿತಟ್ಟೆ ಮತ್ತಿತರವನ್ನು ಸುಮಂಗಲಿಯ ಬಾಳೆ ದಿಂಡಿನ ಮಂಟಪಕ್ಕೆ ಹಾಕಿ ತ್ರಿವೇಣಿ ಸಂಗಮದಲ್ಲಿ ವಿಸರ್ಜಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದು ಅವರು ತಿಳಿಸಿದರು.
ಹಿಂದೆ ಆಷಾಡ ಮಾಸದಲ್ಲಿ ವ್ಯಾಪಕ ಮಳೆಯಾಗು ತ್ತಿತ್ತು. ಇದರಿಂದಾಗಿ ಯಾವುದೇ ಜೀವಕ್ಕೆ ಹಾನಿಯಾಗ ದಂತೆ ಕಾವೇರಿ ಮಾತೆಗೆ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಆದರೆ ಇತ್ತೀಚಿನ ವರ್ಷದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ. ಆದ್ದರಿಂದ ಕಾವೇರಿ ಕಣಿವೆಯಲ್ಲಿ ಹೆಚ್ಚಿನ ಮಳೆಯಾಗಿ ನಾಡಿಗೆ ಸಮೃದ್ದಿ ತರುವಂತಾಗಲಿ ಎಂದು ಕಾವೇರಿ ಮಾತೆಯಲ್ಲಿ ಪ್ರಾರ್ಥಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಭಾಗಮಂಡಲ ಭಗಂಡೇಶ್ವರ ದೇವಾಯಲಯದ ಪ್ರಧಾನ ಅರ್ಚಕರಾದ ಹರೀಶ್ ಭಟ್ ಅವರು ಆಷಾಢ ಮಾಸದ ಅಮಾವಾಸ್ಯೆ ದಿನದಂದು ಭಗಂಡೇಶ್ವರ ದೇವಾಲಯದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬಾಳೆದಿಂಡಿನಿಂದ ಅಲಂಕರಿಸಿದ ಮಂಟಪಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪೊಲಿಂಕಾನ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.
ಜೀವನದಿ ಕಾವೇರಿ ನಾಡಿನಲ್ಲಿ ಉತ್ತಮ ಮಳೆಯಾಗಿ ರೈತರು, ನಾಡಿನ ಜನರಲ್ಲಿ ಸುಭಿಕ್ಷೆ ತರುವಂತಾಗಬೇಕು ಎಂದು ಪೊಲಿಂಕಾನ ಉತ್ಸವದಲ್ಲಿ ಪ್ರಾರ್ಥಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು. ಪೊಲಿಂಕಾನ ಉತ್ಸವದಲ್ಲಿ ಭಗಂಡೇಶ್ವರ ದೇವಾಲ ಯದ ತಕ್ಕ ಮುಖ್ಯಸ್ಥರಾದ ಬಲ್ಲಡ್ಕ ಅಪ್ಪಾಜಿ, ಪಾರು ಪತ್ತೆದಾರರಾದ ಕೆ.ಪಿ. ಪೊನ್ನಣ್ಣ, ತಲಕಾವೇರಿ- ಭಾಗಮಂಡಲ ದೇವಾಲಯದ ಕಾರ್ಯನಿರ್ವಹಣಾ ಧಿಕಾರಿ ಜಗದೀಶ್ ಕುಮಾರ್ ಹಾಜರಿದ್ದರು.