Advertisement

ಭಾಗಮಂಡಲದ ಭಗಂಡೇಶ್ವರ ದೇಗುಲ: ಪೊಲಿಂಕಾನ ಉತ್ಸವ

09:29 PM Aug 02, 2019 | Team Udayavani |

ಮಡಿಕೇರಿ: ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವದ ವಿಶೇಷ ಪೂಜೆ ನಡೆಯಿತು.

Advertisement

ಭಗಂಡೇಶ್ವರ ದೇವಾಲಯದ ಆವರಣದ ಮಹಾಗಣಪತಿ, ಮಹಾವಿಷ್ಣು,ಸುಬ್ರಹ್ಮಣ್ಯ ಹಾಗೂ ಭಗಂಡೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣಗಳನ್ನು ಹಾಕಿ ವಿಶೇಷ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಮಾಡಲಾಯಿತು.

ನಂತರ ವಾದ್ಯಗೋಷ್ಠಿಯೊಂದಿಗೆ ತ್ರಿವೇಣಿ ಸಂಗಮಕ್ಕೆ ತೆರಳಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡು ಕಾವೇರಿ ಮಾತೆಗೆ ಕೃತಜ್ಞತಾಪೂರ್ವಕವಾಗಿ ಸುಮಂಗಲಿ ಮಂಟಪವನ್ನು ವಿಸರ್ಜಿಸಲಾಯಿತು. ನೂರಾರು ಭಕ್ತರು ಪೊಲಿಂಕಾನ ಉತ್ಸವಕ್ಕೆ ಸಾಕ್ಷಿಯಾದರು. ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ, ಅರ್ಚಕ ವೃಂದ ಹಾಗೂ ಭಕ್ತಾಧಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next