ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಯಲು ಭಗತ್ ಸಿಂಗ್ ಕೋಶಿಯಾರಿ ಅವರು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಮವಾರ ಹೇಳಿಕೆ ನೀಡಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಇಂಗಿತದ ಬಗ್ಗೆ ಮಾಹಿತಿ ನೀಡಿರುವುದಾಗಿ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಓದು, ಅಧ್ಯಯನ ಮತ್ತು ಬರವಣಿಗೆಗಳಲ್ಲಿ ತೊಡಗಿಸುವುದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉತ್ತರಾಖಂಡದ ಮಾಜಿ ಸಿಎಂ ಆಗಿರುವ ಕೋಶಿಯಾರಿ ಮಹಾರಾಷ್ಟ್ರದ ರಾಜ್ಯಪಾಲರಾಗಿ 2019 ಸೆ.5ರಂದು ಅಧಿಕಾರ ವಹಿಸಿಕೊಂಡ ದಿನದಿಂದ ಒಂದಲ್ಲ ಒಂದು ಹೇಳಿಕೆ, ನಿರ್ಧಾರಗಳಿಂದ ವಿವಾದಕ್ಕೆ ಗುರಿಯಾಗುತ್ತಲೇ ಇದ್ದರು. ಮಹಾರಾಷ್ಟ್ರದಂಥ ಉತ್ತಮ ರಾಜ್ಯದ ರಾಜ್ಯಪಾಲನಾಗಿ ಕೆಲಸ ನಿರ್ವಹಿಸಲು ಅವಕಾಶ ಸಿಕ್ಕಿದ್ದು ಧನ್ಯತಾ ಭಾವ ತಂದಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೋಟ: ಕುಖ್ಯಾತ ಕಳ್ಳರ ಬಂಧನ… 19 ಲಕ್ಷ ರೂ. ಮೌಲ್ಯದ ಸೊತ್ತುಗಳು ವಶಕ್ಕೆ