ಯಾದಗಿರಿ: ಮಕ್ಕಳಲ್ಲಿ ನೈತಿಕತೆ ಬೆಳೆಸಲು ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಎಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಾಠಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸುವ ಕ್ರಮದ ಬಗ್ಗೆ ನಮ್ಮ ಸಚಿವರು ಪ್ರಸ್ತಾಪಿಸಿದ್ದಾರೆ. ಅದನ್ನು ಮುಂದಿನ ದಿನಗಳಲ್ಲಿ ಜಾರಿಗೆ ತರಲು ಯೋಚಿಸಲಾಗಿದೆ ಎಂದರು.
ಇದನ್ನೂ ಓದಿ:”ದಿ ಕಾಶ್ಮೀರ್ ಫೈಲ್ಸ್” ಕನ್ನಡಕ್ಕೆ ಡಬ್ ಆಗುವ ಎಲ್ಲಾ ಸಾಧ್ಯತೆ
ಸರ್ಕಾರ ಯಾವುದೇ ಕಾರಣಕ್ಕೂ ಕೆಕೆಆರ್ಡಿಬಿಯನ್ನು ನಿರ್ಲಕ್ಷಿಸಿಲ್ಲ. ನಂಜುಂಡಪ್ಪ ವರದಿ ಪ್ರಕಾರ ಅನುದಾನ ನೀಡಲಾಗುತ್ತಿದೆ ಎಂದರು.
ಪಾವಗಡ ಖಾಸಗಿ ಬಸ್ ದುರಂತದ ಬಗ್ಗೆ ಇದೀಗ ತಾನೆ ಗೊತ್ತಾಗಿದೆ. ಅಲ್ಲಿಗೆ ಭೇಟಿ ನೀಡಿ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಂತರ ಕ್ರಮಕೈಗೊಳ್ಳುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.