Advertisement

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

02:30 PM May 09, 2024 | Team Udayavani |

ಹೊಸಬರ “ಭಗೀರಥ’ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಕೆ.ರಮೇಶ್‌ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸಿರುವ ಈ ಚಿತ್ರವನ್ನು ರಾಮ್‌ ಜನಾರ್ದನ್‌ ನಿರ್ದೇಶನ ಮಾಡಿದ್ದಾರೆ.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್‌ ಎಂ ಸುರೇಶ್‌ ಟೀಸರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

Advertisement

“ಕಳೆದ ಸೆಪ್ಟೆಂಬರ್‌ನಲ್ಲಿ ನಮ್ಮ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತ್ತು. ಈಗ ಚಿತ್ರೀಕರಣ ಮುಕ್ತಾಯವಾಗಿ, ತೆರೆಗೆ ಬರಲು ಅಣಿಯಾಗಿದೆ. ಮುಂದಿನ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಚಿತ್ರತಂಡದ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿದೆ. ಬಾಯ್‌ ಫ್ರೆಂಡ್‌ ಚಿತ್ರದಿಂದ ನಾನು ನಿರ್ದೇಶಕನಾದೆ. ಭಗೀರಥ ನನ್ನ ನಿರ್ದೇಶನದ ಐದನೇ ಚಿತ್ರ. ಇದೊಂದು ಪ್ರಸ್ತುತ ರಾಜಕಾರಣದ ಕಥಾಹಂದರ ಹೊಂದಿರುವ ಹಾಗೂ ಪತ್ರಕರ್ತರೊಬ್ಬರ ಸುತ್ತ ನಡೆಯುವ ಕಥೆ. ಈಗ ಟೀಸರ್‌ ಬಿಡುಗಡೆಯಾಗಿದೆ’ ಎನ್ನುವುದು ನಿರ್ದೇಶಕ ರಾಮ್‌ ಜನಾರ್ದನ್‌ ಮಾತು.

“ಜಮಾನ ಚಿತ್ರದ ಮೂಲಕ ನಟನಾದೆ. ಭಗೀರಥ ನನ್ನ ಮೂರನೇಯ ಚಿತ್ರ. ಸೂರ್ಯಪ್ರಕಾಶ್‌ ನನ್ನ ಪಾತ್ರದ ಹೆಸರು. ನಿರ್ದೇಶಕರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಭಗೀರಥ ಹೆಸರಿಗೆ ತಕ್ಕಂತೆ ನೀರಿಗೆ ಸಂಬಂಧಿಸಿದ ಕಥೆಯೂ ಈ ಚಿತ್ರದಲ್ಲಿದೆ ಎಂದರು ನಟ ಸೂರ್ಯ ಪ್ರಕಾಶ್‌.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ಸದ್ಯದಲ್ಲೇ ಚಿತ್ರ ಬಿಡುಗಡೆ ಮಾಡುತ್ತೇವೆ ಎನ್ನುವುದು ನಿರ್ಮಾಪಕರಾದ ಕೆ.ರಮೇಶ್‌ ಹಾಗೂ ಬಿ.ಭೈರಪ್ಪ ಅವರ ಮಾತು. ನಟಿ ಶ್ರೀಯಾ ಪಾವನಿ ನಾಯಕನ ಸೋದರತ್ತೆಯ ಮಗಳ ಪಾತ್ರದಲ್ಲಿ ನಟಿಸಿದ್ದಾಗಿ ಹೇಳಿಕೊಂಡರು.

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಪ್ರದೀಪ್‌ ವರ್ಮ ಹಾಗೂ ಛಾಯಾಗ್ರಹಣದ ಕುರಿತು ಸೂರಿ ಚಿತ್ತೂರು ಮಾತನಾಡಿದರು. ಚಿತ್ರದಲ್ಲಿ ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್‌ ಕೆ.ಆರ್‌.ಪೇಟೆ, ರವಿಕಾಳೆ, ಬಲರಾಜವಾಡಿ ಸೇರಿದಂತೆ ಅನೇಕರು ನಟಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next