Advertisement

ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು

03:17 PM May 13, 2023 | Team Udayavani |

ಸುಳ್ಯ: ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿಯ ಭದ್ರಕೋಟೆಯಲ್ಲಿ ಬಿಜೆಪಿ ತನ್ನ ಪಾರಮ್ಯವನ್ನು ಮುಂದುವರಿಸಿದೆ.

Advertisement

ಭಾಗೀರಥಿ ಮುರುಳ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಭಾಗೀರಥಿ ಮುರುಳ್ಯ ಅವರು 93,911 ಮತಗಳನ್ನು, ಜಿ.ಕೃಷ್ಣಪ್ಪ ಅವರು 63,036 ಮತಗಳನ್ನು ಪಡೆದಿದ್ದು, ಭಾಗೀರಥಿ ಮುರುಳ್ಯ ಅವರಿಗೆ ಸುಮಾರು 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ವಿಶೇಷವಾಗಿ ಸುಳ್ಯದಲ್ಲಿ ಮೂವತ್ತು ವರ್ಷಗಳ‌ ಬಳಿಕ ಹೊಸ ಶಾಸಕರು ವಿಧಾನ ಸಭೆ ಪ್ರವೇಶಿಸಲಿದ್ದಾರೆ. ಭಾಗೀರಥಿ ಮುರುಳ್ಯ ಅವರು ಸುಳ್ಯದ ಮೊದಲ ಮಹಿಳಾ ಶಾಸಕರಾಗಲಿದ್ದಾರೆ. ವಿಶೇಷ ಅಂದರೆ ಸುಳ್ಯದಲ್ಲಿ ನೋಟಾ (NOTA) ಸುಮಾರು ಎರಡವರೆ ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಮೂರನೇ ಸ್ಥಾನ ಕಾಯ್ದುಕೊಂಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next